ನೀಟ್ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ

KannadaprabhaNewsNetwork |  
Published : Jun 22, 2026, 03:00 AM IST
ನೀಟ್ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಭೇಟಿ | Kannada Prabha

ಸಾರಾಂಶ

ವಿಜಯಪುರ ಜಿಲ್ಲೆಯಾದ್ಯಂತ ಭಾನುವಾರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆಯನ್ನು ಜಿಲ್ಲಾಧಿಕಾರಿ ಡಾ.ಆನಂದ.ಕೆ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಾದ್ಯಂತ ಭಾನುವಾರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆಯನ್ನು ಜಿಲ್ಲಾಧಿಕಾರಿ ಡಾ.ಆನಂದ.ಕೆ ಪರಿಶೀಲಿಸಿದರು.

ನಗರದ 19 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ನೀಟ್ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ನಗರದ ಅಥಣಿ ರಸ್ತೆಯಲ್ಲಿರುವ ಕಾಳಿದಾಸ ವಿಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ಠಕ್ಕೆಯಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ನಡೆದ ನೀಟ್ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಂಡಿರುವ ಸಿದ್ಧತೆಗಳು, ಭದ್ರತಾ ವ್ಯವಸ್ಥೆಗಳು ಹಾಗೂ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಸೌಕರ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಪರಿಶೀಲನೆ ವೇಳೆ ಪರೀಕ್ಷಾ ಕೇಂದ್ರಗಳ ಕೊಠಡಿಗಳು, ಪ್ರವೇಶ ದ್ವಾರಗಳು, ಭದ್ರತಾ ತಪಾಸಣಾ ವ್ಯವಸ್ಥೆಗಳು ಹಾಗೂ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದ್ದ ಸೌಲಭ್ಯಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿಗಳು, ಪರೀಕ್ಷೆಯನ್ನು ಯಶಸ್ವಿಯಾಗಿ ಹಾಗೂ ಸುಗಮವಾಗಿ ನಡೆಸಲು ಸೂಚಿಸಿದರು. ಈ ಸಂದರ್ಭದಲ್ಲಿ ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿ ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೋಶಿ ಸ್ಮಾರಕ ಭವನ ಸಮಾಜಕ್ಕೆ ಅರ್ಪಣೆ
ನಿತ್ಯ ಯೋಗದಿಂದ ರೋಗರುಜಿನ ದೂರು