ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲೆಯಲ್ಲಿರುವ ಕೆರೆಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿ ಅಕ್ರಮವಾಗಿ ಒತ್ತುವರಿಯಾಗಿರುವ ಕರೆಗಳನ್ನು ತೆರವುಗೊಳಿಸುವ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 962 ಕೆರೆಗಳಿವೆ. ಎಲ್ಲಾ ಕೆರೆಗಳನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಕಂದಾಯ ಇಲಾಖೆಯಿಂದ ಕೆರೆಗಳನ್ನು ಸರ್ವೇ ನಡೆಸಿ ಸಂಬಂಧ ಪಟ್ಟ ಇಲಾಖೆ ವಶಕ್ಕೆ ಈಗಾಗಲೇ ನೀಡಲಾಗಿದೆ.ಮುಖ್ಯಮಂತ್ರಿಗಳು ಪ್ರತಿ ಮಾಹೆಯಲ್ಲಿ ಕೆರೆ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿ ಆಯಾ ಜಿಲ್ಲೆಯ ಕೆರೆಗಳ ಸರ್ವೇ ಮಾಡಿ ಒತ್ತುವರಿಯಾಗಿದ್ದರೆ ತೆರವುಗೊಳಿಸಿ, ಸಂರಕ್ಷಣೆ ಮಾಡಲು ಡೀಸಿ ಮತ್ತು ಜಿಪಂ ಸಿಇಒಗಳಿಗೆ ಸೂಚಿಸಿದ್ದಾರೆ ಎಂದರು.
ಜಿಲ್ಲೆಯಲ್ಲಿರುವ 962 ಕೆರೆಗಳ ಪೈಕಿ 202 ಕೆರೆಗಳನ್ನು ಒತ್ತುವರಿ ಮಾಡಿರುವುದು ಬೆಳಕಿಗೆ ಬಂದಿದೆ. ಒತ್ತುವರಿಗೊಂಡಿರುವ ಕೆರೆಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.ಅಧಿಕಾರಿಗಳ ಹೆಚ್ಚಿನ ಮುತುವರ್ಜಿ ಮತ್ತು ಜವಾಬ್ದಾರಿ ತೆಗೆದುಕೊಂಡು ಕೆರೆ ಒತ್ತುವರಿ ತೆರವುಗೊಳಿಸಬೇಕು. ನಂತರ ಮತ್ತೆ ಒತ್ತುವರಿ ಮಾಡದಂತೆ ಸಂರಕ್ಷಣೆ ಮಾಡಬೇಕು. ಕೆರೆ ಒತ್ತುವರಿ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಕಾಯ್ದೆ 192 ಬಿ ಅನ್ವಯ ಕರೆ ಸಂರಕ್ಷಣೆ ಮಾಡಲು ಅಧಿಕಾರಿಗಳು ನಿರ್ಲಕ್ಷ್ಯ, ಅಸಡ್ಡೆ ಅಥವಾ ವಿಫಲವಾದರೆ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಬಹುದು ಎಂದು ಅಧಿಕಾರಿಗಳನ್ನು ಎಚ್ಚರಿಸಿದ ಅವರು, ಒತ್ತುವರಿಯಾಗಿರುವ ಕೆರೆಗಳನ್ನು ಸಂರಕ್ಷಣೆ ಮಾಡಲು ಪ್ರತಿ ಮಾಹೆಗೆ ಶೇ.50 ರಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲು ಅಧಿಕಾರಿಗಳಿಗೆ ಗುರಿಯನ್ನು ನೀಡಬೇಕು ಎಂದರು.ತಹಸೀಲ್ದಾರ್ ಬಳಿ ಇರುವ ಅನುದಾನವನ್ನು ಬಳಸಿಕೊಂಡು ಶೀಘ್ರವೇ ಒತ್ತುವರಿ ತೆರವುಗೊಳಿಸಬೇಕು. ತಹಸೀಲ್ದಾರ್ ಇದರ ಉಸ್ತುವಾರಿ ವಹಿಸಿಕೊಂಡು ಕೆರೆ ಸಂರಕ್ಷಣೆ ಮಾಡಲು ನಿರ್ಲಕ್ಷ್ಯ ತೊರುವ ಅಧಿಕಾರಿಗಳ ವಿರುದ್ಧ ಕಾಯ್ದೆ 192 ಬಿ ಅನ್ವಯ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಕೋಶಾಧಿಕಾರಿ ನರಸಿಂಹಮೂರ್ತಿ, ಮಂಡ್ಯ ತಹಸೀಲ್ದಾರ್ ವಿಶ್ವನಾಥ್ ಸೇರಿದಂತೆ ಇನ್ನಿತರ