-ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆತಂಕ
ಕನ್ನಡಪ್ರಭ ವಾರ್ತೆ ಮೈಸೂರು
ಹಿಮೋಫಿಲಿಯಾ, ತಲೆಸೀಮಿಯಾ, ಸಿಕಲ್ ಸೆಲ್ ಕೊರತೆಯಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆತಂಕ ವ್ಯಕ್ತಪಡಿಸಿದರು.ಮೈಸೂರು ಹಿಮೋಫಿಲಿಯಾ ಸೊಸೈಟಿಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು ವಿಭಾಗ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಮಂಗಳವಾರ ಜೆ.ಕೆ. ಮೈದಾನದ ಸಭಾಂಗಣದಲ್ಲಿ ಆಯೋಜಿಸಿದ್ದ ಹಿಮೋಫಿಲಿಯಾ ಪುನರ್ವಸತಿ ಕುರಿತು ಕುಸುಮಾ ಅರಿಕೆ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾಸ್ಪತ್ರೆ ಅಥವಾ ಟ್ರಾಮಾ ಸೆಂಟರ್ ನ ಒಂದೇ ಸೂರಿನಡಿ ಫಿಜಿಯೋಥೆರೆಪಿ, ನರ್ಸಿಂಗ್ ಕೇರ್ ಮತ್ತು ಮೆಡಿಸನ್ ಲಭ್ಯವಾಗಲಿದೆ. ಪ್ರತಿ ರೋಗಿಗೆ ತಿಂಗಳಿಗೊಮ್ಮೆ ಈ ಸೇವೆ ದೊರೆಯುವಂತೆ ಕ್ರಮ ವಹಿಸಲಾಗುವುದು ಎಂದರು.
ಕರ್ನಾಟಕದಲ್ಲಿ 10 ಸಾವಿರಕ್ಕೂ ಹೆಚ್ಚು ಜನರು ಮತ್ತು 1.5 ಲಕ್ಷಕ್ಕೂ ಹೆಚ್ಚು ಈ ದೀರ್ಘಕಾಲದ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ 2016ರಲ್ಲಿ ಅಂಗವೈಕಲ್ಯ ಕಾಯಿದೆಯಡಿ ಅಂಗವೈಕಲ್ಯ ಎಂದು ಘೋಷಿಸಲಾಗಿದೆ. ಆದರೆ, ಕೇವಲ ಶೇ. 25 ಪ್ರತಿಶತದಷ್ಟು ರೋಗಿಗಳು ಗುರುತಿಸಲ್ಪಟ್ಟಿದ್ದಾರೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.