ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ

KannadaprabhaNewsNetwork |  
Published : Feb 12, 2026, 01:30 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದ ಮುಂಭಾಗ ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು. | Kannada Prabha

ಸಾರಾಂಶ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬುಧವಾರ ಬೆಂ.ಗ್ರಾ. ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಪ್ರಯೋಜನಗಳ ಬಗ್ಗೆ ಪ್ರಚಾರ ವಾಹನವು ಸಂಚರಿಸಿ ಎಲ್‍ಇಡಿ ಪರದೆ ಪ್ರದರ್ಶನ ಹಾಗೂ ಕಲಾ ತಂಡಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಿದೆ.

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಬುಧವಾರ ಬೆಂ.ಗ್ರಾ. ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳ ಪ್ರಯೋಜನಗಳ ಬಗ್ಗೆ ಪ್ರಚಾರ ವಾಹನವು ಸಂಚರಿಸಿ ಎಲ್‍ಇಡಿ ಪರದೆ ಪ್ರದರ್ಶನ ಹಾಗೂ ಕಲಾ ತಂಡಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಿದೆ.

ಜಿಲ್ಲೆಯಾದ್ಯಂತ ಗ್ರಾಮ, ಪಟ್ಟಣಗಳಲ್ಲಿ ಜಾಗೃತಿ ವಾಹನ ಸಂಚರಿಸಲಿದ್ದು ಪಂಚ ಗ್ಯಾರಂಟಿ ಯೋಜನೆಗಳು ತಲುಪದ ಅರ್ಹ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಲು, ಸಾರ್ವಜನಿಕರು ಯೋಜನೆಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಲು ನೆರವಾಗಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.ಫೋಟೋ-

11ಕೆಡಿಬಿಪಿ1- ಬೆಂ.ಗ್ರಾ ಜಿಲ್ಲಾಡಳಿತ ಭವನದ ಮುಂಭಾಗ ಗ್ಯಾರಂಟಿ ಯೋಜನೆಗಳ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಿ: ಚಲುವರಾಯಸ್ವಾಮಿ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದೇವೆ