ಬಸವ ಸಂಸ್ಕೃತಿ ಅಭಿಯಾನದ ಪ್ರಯುಕ್ತ ಸಾಮರಸ್ಯದ ನಡಿಗೆಗೆ ಜಿಲ್ಲಾಧಿಕಾರಿ ಚಾಲನೆ

KannadaprabhaNewsNetwork |  
Published : Sep 15, 2025, 01:00 AM IST
ಹಾವೇರಿಯಲ್ಲಿ ಬಸವ ಸಂಸ್ಕೃತಿ ಅಭಿಯಾನ ಅಂಗವಾಗಿ ಬಸವಣ್ಣನವರ ಕುರಿತಾದ ಸ್ತಬ್ಧಚಿತ್ರ ಹಾಗೂ ಸಾಮರಸ್ಯದ ನಡಿಗೆ ಮೆರವಣಿಗೆಗೆ ನಡೆಯಿತು. | Kannada Prabha

ಸಾರಾಂಶ

ಸಾಮರಸ್ಯದ ನಡಿಗೆಯಲ್ಲಿ ಮಹಿಳಾ ಬಸವಾಭಿಮಾನಿಗಳು ವಚನ ಗ್ರಂಥವನ್ನು ತಲೆ ಮೇಲೆ ಹೊತ್ತು ಹೆಜ್ಜೆ ಹಾಕಿದರು.

ಹಾವೇರಿ: ಬಸವ ಸಂಸ್ಕೃತಿ ಅಭಿಯಾನ ಅಂಗವಾಗಿ ನಗರದ ಹುಕ್ಕೇರಿಮಠ ಆವರಣದಲ್ಲಿ ಭಾನುವಾರ ಮಧ್ಯಾಹ್ನ ಸಾಮರಸ್ಯದ ನಡಿಗೆ ಮೆರವಣಿಗೆಗೆ ಚಾಲನೆ ನೀಡಲಾಯಿತು.ಲಿಂಗಾಯತ ಮಠಾಪತಿಗಳ ಒಕ್ಕೂಟ, ಬಸವ ಸಂಸ್ಕೃತಿ ಅಭಿಯಾನ ಸಮಿತಿ ಹಾವೇರಿ ಜಿಲ್ಲಾ ಘಟಕ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾಮರಸ್ಯದ ನಡಿಗೆ ಮೆರವಣಿಗೆಗೆ ಜಿಲ್ಲಾಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಚಾಲನೆ ನೀಡಿದರು.

ಹುಕ್ಕೇರಿಮಠದಿಂದ ಆರಂಭವಾದ ಸಾಮರಸ್ಯದ ನಡಿಗೆ ಮೆರವಣಿಗೆಯು ಪೋಸ್ಟ್ ಆಫೀಸ್ ರಸ್ತೆ, ಮೇಲಿನಪೇಟೆ ಕ್ರಾಸ್, ದ್ಯಾಮವ್ವನ ಪಾದಗಟ್ಟಿ, ಎಂ.ಜಿ. ರೋಡ್, ಎಂ.ಜಿ. ವೃತ್ತ, ಹಳೇ ಕೋರ್ಟ್, ಜೆ.ಪಿ ವೃತ್ತ, ಗೂಗಿಕಟ್ಟಿ, ಪಿ.ಬಿ ರಸ್ತೆ, ಹೊಸಮನಿ ಸಿದ್ದಪ್ಪ ವೃತ್ತದ ಮಾರ್ಗವಾಗಿ ರಜನಿ ಸಭಾಂಗಣವನ್ನು ತಲುಪಿತು.ಸಾಮರಸ್ಯದ ನಡಿಗೆಯಲ್ಲಿ ಮಹಿಳಾ ಬಸವಾಭಿಮಾನಿಗಳು ವಚನ ಗ್ರಂಥವನ್ನು ತಲೆ ಮೇಲೆ ಹೊತ್ತು ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿ ಡೊಳ್ಳು ವಾದ್ಯ, ಗೊಂಬೆ ಕುಣಿತ, ಝಾಂಜ್ ಮೇಳ, ನಂದಿಕೋಲು ಕುಣಿತ ಸೇರಿದಂತೆ ಸಕಲ ವಾದ್ಯ ವೈಭವಗಳೊಂದಿಗೆ ಬಸವಣ್ಣನವರ ಕುರಿತಾದ ಸ್ಥಬ್ಧಚಿತ್ರ ಮೆರವಣಿಗೆಯೂ ನಡೆಯಿತು. ಮೆರವಣಿಗೆಯುದ್ದಕ್ಕೂ ಬಸವಣ್ಣನವರ ಕುರಿತಾದ ವಚನಗಳನ್ನು ಹೇಳುತ್ತಾ, ಬಸವ ಪರ ಘೋಷಣೆಗಳನ್ನು ಕೂಗುತ್ತಾ ಹೆಜ್ಜೆ ಹಾಕಿದರು. ಈ ವೇಳೆ ಲಿಂಗಾಯತ ಮಠಾಪತಿಗಳ ಒಕ್ಕೂಟದ ಅಧ್ಯಕ್ಷ ಬಾಲ್ಕಿಯ ಡಾ. ಬಸವಲಿಂಗ ಪಟ್ಟದ್ದೇವರು, ಸಾಣೇಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗದಗ ತೊಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಕೂಡಲಸಂಗಮ ಬಸವಧರ್ಮ ಪೀಠದ ಡಾ. ಗಂಗಾಮಾತಾಜಿ, ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಶಿರಸಿಯ ಮಲ್ಲಿಕಾರ್ಜುನ ಸ್ವಾಮೀಜಿ, ಬಸವಕಲ್ಯಾಣದ ಬಸವಪ್ರಭು ಸ್ವಾಮೀಜಿ, ಬೆಳಗಾವಿಯ ಅಲ್ಲಮಪ್ರಭು ಸ್ವಾಮೀಜಿ, ಹಂದಿಗುಂದದ ಶಿವಾನಂದ ಸ್ವಾಮೀಜಿ, ಶೇಗುಣಸಿಯ ಮಹಾಂತ ಸ್ವಾಮೀಜಿ, ಬನವಾಸಿಯ ಬಸವನಾಗಭೂಷಣ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ