ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚನೆ

KannadaprabhaNewsNetwork | Published : Apr 6, 2024 12:47 AM

ಸಾರಾಂಶ

ತುಮಕೂರು ತಾಲೂಕಿನ ಬುಗುಡನಹಳ್ಳಿ, ಬೆಳ್ಳಾವಿ, ಹೊಳಕಲ್ಲು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಂದು ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರು ಪೂರೈಸುವಂತೆ ಮತ್ತು ಅಡಚಣೆಯಿಲ್ಲದೆ ನಿರಂತರವಾಗಿ ಸಮರ್ಪಕ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರುತುಮಕೂರು ತಾಲೂಕಿನ ಬುಗುಡನಹಳ್ಳಿ, ಬೆಳ್ಳಾವಿ, ಹೊಳಕಲ್ಲು ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರಿಂದು ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರು ಪೂರೈಸುವಂತೆ ಮತ್ತು ಅಡಚಣೆಯಿಲ್ಲದೆ ನಿರಂತರವಾಗಿ ಸಮರ್ಪಕ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಡಿಕೆ ತೋಟಗಳಿಗೆ ಭೇಟಿ:

ಬುಗುಡನಹಳ್ಳಿ ಗ್ರಾ.ಪಂ.ಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು ರೈತರಿಗೆ ನಿಗದಿತ ಅವಧಿಯಲ್ಲಿ ಸಮರ್ಪಕ ವಿದ್ಯುತ್ ಪೂರೈಸುವಂತೆ ಬೆಸ್ಕಾಂ ಸಹಾಯಕ ಎಂಜಿನಿಯರ್ ವೀಣಾ ಅವರಿಗೆ ಸೂಚಿಸಿದರು. ಕೃಷ್ಣಪ್ಪ ಎಂಬ ರೈತರ ಅಡಿಕೆ ತೋಟಕ್ಕೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಿಸಿದ ಅವರು, ಸಣ್ಣ-ಪುಟ್ಟ ಕಾರಣಗಳಿಗಾಗಿ ವಿದ್ಯುತ್ ಅನ್ನು ಹೆಚ್ಚು ಅವಧಿಗೆ ಕಡಿತಗೊಳಿಸದೆ ತ್ವರಿತಗತಿಯಲ್ಲಿ ಸಮಸ್ಯೆಗಳನ್ನು ನಿವಾರಿಸಿ ವಿದ್ಯುತ್ ಸಂಪರ್ಕವನ್ನು ಶೀಘ್ರವಾಗಿ ಒದಗಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸೂಚಿಸಿದರು. ಮೇವಿನ ಬ್ಯಾಂಕ್ ಸ್ಥಾಪನೆ

ನಂತರ ಬೆಳ್ಳಾವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಅಲ್ಲಿನ ರೈತರು ಮೇವಿನ ಕೊರತೆ ಇರುವ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಾಗ, ಈಗಾಗಲೇ ಪಶುಪಾಲನಾ ಇಲಾಖೆ ವತಿಯಿಂದ 347 ಮೇವಿನ ಕಿಟ್‌ಗಳನ್ನು 4 ಹಂತದಲ್ಲಿ ಬೆಳ್ಳಾವಿ ಗ್ರಾಮಪಂಚಾಯತಿ ವ್ಯಾಪ್ತಿಯ ರೈತರಿಗೆ ವಿತರಿಸಲಾಗಿದೆ. ಬೆಳ್ಳಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮೇವಿನ ಬ್ಯಾಂಕ್ ಸ್ಥಾಪಿಸಲು ತುರ್ತಾಗಿ ಸ್ಥಳ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಶುಪಾಲನಾ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು. ತದನಂತರ ಹೊನ್ನುಡಿಕೆ ಹ್ಯಾಂಡ್‌ಪೋಸ್ಟ್ ಬಳಿಯ ಎ.ಕೆ.ಕಾವಲ್‌ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಕುಡಿಯುವ ನೀರನ ಪೂರೈಕೆ ಕುರಿತಂತೆ ಸಾರ್ವಜನಿಕರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಪುಟ್ಟಮ್ಮ ಎಂಬ ಮಹಿಳೆ 3 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು. ಸಮರ್ಪಕ ಕುಡಿಯುವ ನೀರು ಪೂರೈಕೆ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾ ಯೋಜನೆಯಡಿ ಮಂಜೂರಾಗಿರುವ ಕೊಳವೆ ಬಾವಿಯನ್ನು ತ್ವರಿತವಾಗಿ ಕೊರೆಯಿಸುವ ಬಗ್ಗೆ ತ್ವರಿತವಾಗಿ ಅಗತ್ಯ ಕ್ರಮವಹಿ ಸುವಂತೆ ಹೊಳಕಲ್ಲು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ರವೀಶ್, ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್, ತಹಶೀಲ್ದಾರ್ ಸಿದ್ದೇಶ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಕುಮಾರ್ ಮತ್ತಿತರರು ಹಾಜರಿದ್ದರು

Share this article