ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಪರಿಶೀಲನೆ ವೇಳೆ ಸಾರ್ವಜನಿಕರಿಂದ ಕೇಳಿಬಂದ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿಗಳು ಇ-ಸ್ವತ್ತು ವಿತರಣೆಯಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿ ತಿಂಗಳುಗಟ್ಟಲೆ ಇ-ಸ್ವತ್ತು ಅರ್ಜಿಗಳನ್ನು ಬಾಕಿ ಇಟ್ಟುಕೊಳ್ಳುವುದು ಸರಿಯಲ್ಲ. ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ಪರಿಶೀಲಿಸಿ ವಿತರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ತಾಂತ್ರಿಕ ಕಾರಣಗಳನ್ನು ನೀಡಿ ಸಾರ್ವಜನಿಕರನ್ನು ಅಲೆದಾಡಿಸಬಾರದು. ಒಂದು ವೇಳೆ ಸಮಸ್ಯೆಗಳಿದ್ದರೆ ಕೂಡಲೇ ಗಮನಕ್ಕೆ ತಂದು ಬಗೆಹರಿಸಿಬೇಕು ಎಂದರು.
*ಶಿಸ್ತು ಕ್ರಮದ ಎಚ್ಚರಿಕೆ: ಕಚೇರಿಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ, ಬಾಕಿ ಇರುವ ಕಡತಗಳನ್ನು ಕೂಡಲೇ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಗಡುವು ನೀಡಿ ಕಂಪ್ಯೂಟರ್ ಮತ್ತು ಆನ್‌ಲೈನ್ ಸೌಲಭ್ಯಗಳಿದ್ದರೂ ಕೆಲಸ ವೇಗವಾಗಿ ನಡೆಯುತ್ತಿಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರ್ತವ್ಯ ಲೋಪ ಎಸಗುವ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದರು. ನಗರಸಭೆ ವ್ಯಾಪ್ತಿಯ ಜನಸಾಮಾನ್ಯರಿಗೆ ಯಾವುದೇ ಅಡೆತಡೆಯಿಲ್ಲದೆ ಸೇವೆ ಸಿಗುವಂತೆ ಪಾರದರ್ಶಕ ವ್ಯವಸ್ಥೆ ಜಾರಿಗೆ ತರಬೇಕು ಎಂದು ತಾಕೀತು ಮಾಡಿದರು.ಈ ಸಂದರ್ಭದಲ್ಲಿ ನಗರಸಭೆಯ ಪೌರಾಯುಕ್ತೆ ಲಕ್ಷ್ಮೀ, ನಗರಸಭೆ ಕಾರ್ಯಪಾಲಕ ಇಂಜಿನಿಯರ್ ರಾಜು, ಕಂದಾಯ ಅಧಿಕಾರಿ ಪ್ರಕಾಶ್, ಕಚೇರಿ ವ್ಯವಸ್ಥಾಪಕ ಜಯಣ್ಣ ಸೇರಿದಂತೆ ಮತ್ತಿರರು ಇದ್ದರು.