ಸೋಮವಾರಪೇಟೆ ತಹಸೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

KannadaprabhaNewsNetwork |  
Published : Jun 20, 2025, 12:34 AM IST
ಚಿತ್ರ : 19ಎಂಡಿಕೆ2 : ಸೋಮವಾರಪೇಟೆ ತಹಶೀಲ್ದಾರರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸಭೆ ನಡೆಸಿದರು.  | Kannada Prabha

ಸಾರಾಂಶ

ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಸೀಲ್ದಾರರಿಗೆ ಕೊಡಗು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಭೂಸುರಕ್ಷತೆ, ಕಂದಾಯ ದಾಖಲೆ ಡಿಜಿಟಲೀಕರಣದ ಮಾಹಿತಿ ಪಡೆದ ಡಿಸಿ

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಸೋಮವಾರಪೇಟೆ ತಾಲೂಕು ತಹಸೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು.ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಸೀಲ್ದಾರರಿಗೆ ನಿರ್ದೇಶನ ನೀಡಿದರು.ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭ ತಹಸೀಲ್ದಾರ್ ಕೃಷ್ಣಮೂರ್ತಿ, ಉಪ ತಹಸೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.ಅಧಿಕಾರಿಗಳ ಜೊತೆ ಸಭೆ:

ಸೋಮವಾರಪೇಟೆ ತಾಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲೂಕುಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭ ಸಭೆ ನಡೆಸಿದರು.ಈ ಬಾರಿ ಮುಂಗಾರು ಬೇಗ ಆರಂಭವಾಗಿದ್ದು, ಮೇ ಮತ್ತು ಜೂನ್‌ನಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಅಂಗನವಾಡಿ, ಶಾಲಾ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿಗತಿ ಬಗ್ಗೆ ಕೂಡಲೇ ವರದಿ ನೀಡಬೇಕು. ಸುಸ್ಥಿತಿಯಲ್ಲಿರದ ಶಾಲಾ, ಕಾಲೇಜು, ಅಂಗನವಾಡಿ ಕಟ್ಟಡ ಸಂಬಂಧ ಅಂದಾಜುಪಟ್ಟಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾಕೃತಿಕ ವಿಕೋಪ ಕಾಲ ಕಾಲಕ್ಕೆ ಹವಾಮಾನ ಇಲಾಖೆ ಹೊರಡಿಸುವ ಮಾಹಿತಿ ಹಂಚಿಕೊಳ್ಳಬೇಕು. ಅತೀವೃಷ್ಟಿಯಿಂದ ಮನೆ, ಮತ್ತಿತರ ಹಾನಿ ಸಂಭವಿಸಿದಲ್ಲಿ ಕೂಡಲೇ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ತಹಸೀಲ್ದಾರರು ಮತ್ತು ತಾ.ಪಂ. ಇಒಗಳ ಜೊತೆ ತಾಲೂಕು ಮಟ್ಟದಲ್ಲಿ ಎಲ್ಲ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅಹವಾಲಿಗೆ ಸ್ಪಂದಿಸುಂತೆ ನಿರ್ದೇಶನ ನೀಡಿದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ. ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಸೀಲ್ದಾರ್ ಕೃಷ್ಣಮೂರ್ತಿ, ತಾ.ಪಂ. ಇಒ ಪರಮೇಶ ಇತರರು ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ