ಮಡಿಕೇರಿ : ಡೈನಾಮಿಕ್ ಲೀಡರ್ ಎಂದೇ ಅಭಿಮಾನಿ ವಲಯದಲ್ಲಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಮಾಜಿ ಕೊಡಗು ಜಿಲ್ಲಾ ಪಂಚಾಯತ್ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ ರವರಿಗೆ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿ ಯಶಸ್ವಿಯಾಗಿ ನಿಭಾಯಿಸಿದ ಶಿವು ಮಾದಪ್ಪ ನವರ ಅಗಲಿಕೆ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಮಾತನಾಡಿ ಜನಪ್ರತಿನಿಧಿಯಾಗಿ,ರಾಜಕಾರಣಿಯಾಗಿ, ಸಮಾಜ ಸೇವಕರಾಗಿ ಜಿಲ್ಲೆಯಲ್ಲಿ ಜನಾನುರಾಗಿ ನಾಯಕರಾಗಿ ಗುರುತಿಸಿಕೊಂಡ ಶಿವು ಮಾದಪ್ಪ ಅವರ ಅಗಲಿಕೆ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದರು.
ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಉಪಾಧ್ಯಕ್ಷರಾದ ಸುಜು ತಿಮ್ಮಯ್ಯ, ಕೆಪಿಸಿಸಿ ಸದಸ್ಯರಾದ ಬೇಕಲ್ ರಮಾನಾಥ್, ಅಲ್ಪ ಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷರಾದ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ.ಶಶಿಧರ್, ಎಚ್.ಎ.ಹಂಸ, ಇಸ್ಮಾಯಿಲ್, ಪಟ್ಟಡ ರಂಜಿ ಪೂಣಚ್ಚ , ಮೀದೇರಿರ ನವೀನ್ ಸೇರಿದಂತೆ ಪ್ರಮುಖರು ಶಿವು ಮಾದಪ್ಪ ನವರ ಗುಣಗಾನ ಮಾಡಿ ನುಡಿನಮನ ಸಲ್ಲಿಸಿದರು.