ಜಿಲ್ಲಾ ಕಾಂಗ್ರೆಸ್ , ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಹುಟ್ಟುಹಬ್ಬ ಆಚರಣೆ

KannadaprabhaNewsNetwork | Published : Dec 14, 2024 12:46 AM

ಸಾರಾಂಶ

ನಂತರ ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಅವರ ಸಂಬಂಧಿಕರಿಗೆ ಗಂಜಿ ಹಾಗೂ ಉಪಹಾರ ವಿತರಣೆ, ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರೇರಣಾ ಅಂಧರ ಶಾಲೆ ಮಕ್ಕಳಿಗೆ ಆಹಾರ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರ 55ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷ ಚಂದಗಾಲು ವಿಜಯ್ ಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿದರು.

ನಗರದ ಗಣಪತಿ ದೇವಾಲಯದಲ್ಲಿ ಸಿ.ಡಿ.ಗಂಗಾಧರ್ ಹೆಸರಿನಲ್ಲಿ ವಿಶೇಷ ಪೂಜಾ ಕಾರ್ಯಕ್ರಮ, ಜಿಲ್ಲಾಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ವಿತರಣೆ, ಮಮತೆಯ ಮಡಿಲು ಅನ್ನ ದಾಸೋಹ ಕೇಂದ್ರದಲ್ಲಿ ಬಾಣಂತಿಯರಿಗೆ ಗಂಜಿ ವಿತರಣೆ ಹಾಗೂ ಪ್ರೇರಣಾ ಅಂಧ ಮಕ್ಕಳ ಶಾಲೆಯ ಮಕ್ಕಳಿಗೆ ಊಟ ವಿತರಣೆ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್ ಮಾತನಾಡಿ, ಸಿ.ಡಿ.ಗಂಗಾಧರ್ ಅವರಿಗೆ ರಾಜಕೀಯ ರಂಗದಲ್ಲಿ ಇನ್ನು ಹೆಚ್ಚಿನ ಅವಕಾಶ ಸಿಗಲಿ ಎಂದು ಹಾರೈಸಿದರು. ಕೆಪಿಸಿಸಿ ಮಾಜಿ ಸದಸ್ಯ ಕೆ. ಎಚ್. ನಾಗರಾಜು ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್ ಅವರಿಗೆ ಭಗವಂತ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ. ರಾಜಕೀಯ ರಂಗದಲ್ಲಿ ಹೆಚ್ಚಿನ ಶ್ರೇಯಸ್ಸು ಪಡೆದು ಉನ್ನತ ಸ್ಥಾನ ಅಲಂಕರಿಸಲಿ. ಕಾಂಗ್ರೆಸ್ ಪಕ್ಷಕ್ಕೆ ಸಿ.ಡಿ.ಗಂಗಾಧರ್ ರವರ ಕೊಡುಗೆ ಅಪಾರವಾಗಿದೆ. ಇನ್ನು ಹೆಚ್ಚಿನ ಜನಸೇವೆ ಮಾಡುವ ಅವಕಾಶ ಅವರಿಗೆ ಸಿಗಲಿ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶ್ರೀಧರ್ ಮಾತನಾಡಿ, ಸಿ.ಡಿ.ಗಂಗಾಧರ್ ಅವರಿಗೆ ದೇವರು ಸಕಲ ಸೌಭಾಗ್ಯ ಕೊಟ್ಟು ಅವರ ಇಷ್ಟಾರ್ಥ ಸಿದ್ಧಿಯಾಗಲಿ, ಅವರಿಗೆ ಇನ್ನೂ ಹೆಚ್ಚಿನ ರಾಜಕೀಯ ಸ್ಥಾನ ಸಿಗಲಿ ಎಂದರು.

ನಂತರ ಮಮತೆಯ ಮಡಿಲು ಅನ್ನದಾಸೋಹ ಕೇಂದ್ರದಲ್ಲಿ ರೋಗಿಗಳು ಅವರ ಸಂಬಂಧಿಕರಿಗೆ ಗಂಜಿ ಹಾಗೂ ಉಪಹಾರ ವಿತರಣೆ, ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರೇರಣಾ ಅಂಧರ ಶಾಲೆ ಮಕ್ಕಳಿಗೆ ಆಹಾರ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಚಿನಕುರಳಿ ರಮೇಶ್, ಗ್ಯಾರಂಟಿ ಯೋಜನೆಯ ಸದಸ್ಯ ಎಚ್.ಎಂ.ಉದಯಕುಮಾರ್, ಜಿಲ್ಲಾ ಹಿಂದುಳಿದ ವರ್ಗಗಳ ಕಾಂಗ್ರೆಸ್ ಅಧ್ಯಕ್ಷ ಸಾತನೂರು ಕೃಷ್ಣ, ಸೋನಿಯಾ ಬ್ರಿಗೇಡ್ ಜಿಲ್ಲಾಧ್ಯಕ್ಷೆ ವೀಣಾ ಶಂಕರ್, ಬೇಲೂರು ಗ್ರಾಪಂ ಅಧ್ಯಕ್ಷೆ ಸುವರ್ಣಾವತಿ, ಜಿಪಂ ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ಕಾಂಗ್ರೆಸ್ ಮುಖಂಡರಾದ ಕೊತ್ತತ್ತಿರಾಜು, ಸುಂಡಹಳ್ಳಿ ಮಂಜುನಾಥ್ , ಸಿ.ಎಂ. ದ್ಯಾವಪ್ಪ, ಹಿಟ್ಟನಹಳ್ಳಿ ಕೊಪ್ಪಲು ನಾಗರಾಜು, ಎಲ್.ಸಂದೇಶ್, ರಾಜಣ್ಣ, ಕಲ್ಲಹಳ್ಳಿ ನಾಗೇಂದ್ರ, ಪ್ರಕಾಶ್, ಚನ್ನಪ್ಪ, ಶಶಿಕಲಾ, ಜಯಲಕ್ಷ್ಮೀ,ಅನುರಾಧ ಸೇರಿದಂತೆ ಇತರರು ಹಾಜರಿದ್ದರು.

Share this article