- ಎಲ್ಲರ ಅಭಿಪ್ರಾಯ ಕ್ರೋಢೀಕರಿಸಿ ಹೈಕಮಾಂಡ್‌ಗೆ ವರದಿ: ರಾಹುಲ್ ಬಾಲ್ ಹೇಳಿಕೆ
ಕನ್ನಡಪ್ರಭ ವಾರ್ತೆ ಜಗಳೂರು
ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಕಾವು ಪಡೆದುಕೊಂಡಿದ್ದು, ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ವೀಕ್ಷಕ ರಾಹುಲ್ ಬಾಲ್ ಬುಧವಾರ ಜಗಳೂರು ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಗೆ ಭೇಟಿ ನೀಡಿ ಪ್ರಮುಖ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದರು.ರಾಹುಲ್ ಬಾಲ್ ಈ ಸಂದರ್ಭ ಮಾತನಾಡಿ, ಈ ಹಿಂದೆ ಜಿಲ್ಲಾಧ್ಯಕ್ಷರ ಆಯ್ಕೆಯನ್ನು ನೇರವಾಗಿ ಹೈಕಮಾಂಡ್ ನಿರ್ಧರಿಸುತ್ತಿತ್ತು. ಆದರೆ, ಈಗ ಆ ಪದ್ಧತಿಯಲ್ಲಿ ಬದಲಾವಣೆ ತರಲಾಗಿದೆ. ಕ್ಷೇತ್ರವಾರು ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಪಕ್ಷದ ಸಿದ್ಧಾಂತಕ್ಕೆ ಪ್ರಾಮಾಣಿಕವಾಗಿ ಶ್ರಮಿಸಿದ ಪ್ರತಿ ಕಾರ್ಯಕರ್ತ ಮತ್ತು ನಾಯಕನಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಆಕಾಂಕ್ಷಿಗಳೊಂದಿಗೆ ''''ಒನ್ ಟು ಒನ್'''''''' ಮುಖಾಮುಖಿ ಚರ್ಚೆ ನಡೆಸಲಾಗಿದೆ. ಜಗಳೂರು ಕ್ಷೇತ್ರದಿಂದ ಕೆಪಿಸಿಸಿ ಸದಸ್ಯ ಕಲ್ಲೇಶ್‌ರಾಜ್ ಪಟೇಲ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರು, ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಹೈಕಮಾಂಡ್‌ಗೆ ವರದಿ ಸಲ್ಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಶಾಸಕ ಬಿ.ದೇವೇಂದ್ರಪ್ಪ, ಬ್ರಾಹ್ಮಣ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕೆ.ಪಿ.ಸಿ.ಸಿ. ಸದಸ್ಯ ಕಲ್ಲೇಶ್ ರಾಜ್ ಪಟೇಲ್, ಕೆಪಿಸಿಸಿ ಎಸ್‌ಟಿ ಘಟಕದ ಮಾಜಿ ಅಧ್ಯಕ್ಷ ಕೆ.ಪಿ. ಪಾಲಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ. ಕೀರ್ತಿಕುಮಾರ್ ಅವರಿಂದ ಪ್ರತ್ಯೇಕವಾಗಿ ಅಭಿಪ್ರಾಯಗಳನ್ನು ಸ್ವೀಕರಿಸಿದರು.
ಜಿಲ್ಲಾಧ್ಯಕ್ಷ ಮಂಜುನಾಥ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಷಂಷೀರ್ ಅಹಮದ್, ಕಂಬತ್ತಳ್ಳಿ ಮಂಜುನಾಥ್, ಪಿ.ಸುರೇಶ್ ಗೌಡ, ಮಹೇಶ್ವರಪ್ಪ, ಯುವ ಕಾಂಗ್ರೆಸ್ ಹಾಗೂ ಮಹಿಳಾ ಘಟಕದ ಅಧ್ಯಕ್ಷರು, ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.
-29ಜೆಜಿಎಲ್3: ನೂತನ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ವೀಕ್ಷಕ ರಾಹುಲ್ ಬಾಲ್ ಬುಧವಾರ ಜಗಳೂರು ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಗೆ ಭೇಟಿ ನೀಡಿದರು.