ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಸಿ. ಯೋಗೀಶ್, ಬಿಜೆಪಿಗರು ಸಂವಿಧಾನ ವಿರೋಧಿಗಳಾಗಿದ್ದಾರೆ. ಪವಿತ್ರವಾದ ಮತದಾನದ ಕಳ್ಳತನಕ್ಕೆ ಕೈ ಹಾಕಿದ್ದಾರೆ. ದೇಶದಲ್ಲಿ ಸುಮಾರು 13 ಕೋಟಿ ಮತಗಳನ್ನು ರದ್ದುಪಡಿಸಲಾಗಿದೆ. ಇವರು ಯಾರೂ 2014ರಲ್ಲಿ ಮತ ಹಾಕಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಇವು ಕಾಂಗ್ರೆಸ್ ಮತಗಳು ಎಂದು ಗೊತ್ತಾಗಿಯೇ ಡಿಲಿಟ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇವತ್ತು ಶಿವಮೊಗ್ಗದಲ್ಲಿ ಅರಾಜಕತೆಯ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅರಾಜಕತೆ ಎನ್ನುವ ಅರ್ಥವೇ ಇವರಿಗೆ ಗೊತ್ತಿಲ್ಲ. ಯಾವುದು ಅರಾಜಕತೆ? ಉದ್ಯೋಗ ನೀಡದಿರುವುದೇ? ನೋಟ್ ಬ್ಯಾನ್ ಮಾಡುವುದೇ? ಜಾಗಟೆ ಬಾರಿಸುವುದೇ? ಧರ್ಮದ ಹೆಸರಲ್ಲಿ ಜನರನ್ನು ದಾರಿ ತಪ್ಪಿಸುವುದೇ? ಕಸ, ಯೋಗದ ಹೆಸರಲ್ಲಿ ಜನರನ್ನು ದಿಕ್ಕು ತಪ್ಪಿಸುವುದೇ ಎಂದು ಪ್ರಶ್ನೆ ಮಾಡಿದರು.ಸೂಡಾ ಅಧ್ಯಕ್ಷ ಸಿ.ಜಿ. ಮಧುಸೂದನ್ ಮಾತನಾಡಿ, ಮತದಾನ ಎಂಬುದು ಪ್ರಜಾಪ್ರಭುತ್ವದ ಮೂಲ ಆಧಾರ. ಮತದಾರರ ಪಟ್ಟಿಯಲ್ಲಿನ ಅಕ್ರಮಗಳು, ಎಸ್‌ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಮತದಾರರ ಹೆಸರು ಕೈಬಿಡುವ ಪ್ರಕ್ರಿಯೆ ಮತ್ತು ಇವಿಎಂ ಕುರಿತ ಅನುಮಾನಗಳನ್ನು ದೂರ ಮಾಡದೆ ಚುನಾವಣೆ ನಡೆಸಿದರೆ ಅದು ಪ್ರಜಾಪ್ರಭುತ್ವಕ್ಕೆ ಮಾರಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಹೆಗ್ಡೆ, ಕಲೀಂ ಪಾಷಾ, ಇಸ್ಮಾಯಿಲ್ ಖಾನ್, ಶಿವಕುಮಾರ್, ಡಾ.ಶ್ರೀನಿವಾಸ ಕರಿಯಣ್ಣ, ಎಸ್.ಟಿ. ಹಾಲಪ್ಪ, ಎಸ್.ಪಿ. ಶೇಷಾದ್ರಿ, ಚಂದ್ರಭೂಪಾಲ್, ವೈ.ಎಚ್. ನಾಗರಾಜ್, ಆರ್. ರಾಜಶೇಖರ್, ಎಸ್.ಟಿ. ಚಂದ್ರಶೇಖರ್, ಕೆ.ರಂಗನಾಥ್, ನಾಗರಾಜ್ ಕಂಕಾರಿ, ಎಚ್. ಪಾಲಾಕ್ಷಿ, ರೇಖಾ ರಂಗನಾಥ್, ಕೆ. ದೇವೇಂದ್ರಪ್ಪ, ವಿಶ್ವನಾಥ್ ಕಾಶಿ, ನೇತಾಜಿ, ಮಂಜುನಾಥ ಬಾಬು, ಕೆ.ಜೆ. ನಾಗೇಶ್ ನಾಯ್ಕ್, ಇಕ್ಕೇರಿ ರಮೇಶ್ ಮತ್ತಿತರರು ಇದ್ದರು.