ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತದಿಂದ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ,ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಎರಡು ಸ್ತಬ್ಧ ಚಿತ್ರಗಳನ್ನು ಸಜ್ಜುಗೊಳಿಸಿದ್ದು, ಬಾಗಲಕೋಟೆ ಮತ್ತು ಜಮಖಂಡಿ ಉಪವಿಭಾಗಗಳ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸಂಚರಿಸಲಿವೆ. ಈ ಜಾಗೃತಿ ಜಾಥಾ ಫೆಬ್ರವರಿ 22ರವರೆಗೆ ನಡೆಯಲಿದ್ದು, ನಂತರ ಬೆಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರೀಯ ಏಕತೆ ಸಮಾವೇಶದಲ್ಲಿ ಜಿಲ್ಲೆಯ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರತನ್ನ ಆರ್ಥಿಕ ಸಾಮರ್ಥ್ಯ ಮತ್ತು ಅಭಿವೃದ್ಧಿಯ ಪರಿಮಿತಿಯಲ್ಲಿ ಉದ್ಯೋಗ, ಶಿಕ್ಷಣ ಹಾಗೂ ನಿರುದ್ಯೋಗ ವೇತನ, ವೃದ್ಧಾಪ್ಯ, ಅನಾರೋಗ್ಯ ಮತ್ತು ಅಸಮರ್ಥತೆಯ ಸಂದರ್ಭಗಳಲ್ಲಿ ಸಹಾಯ ನೀಡಲು ಪರಿಣಾಮಕಾರಿ ಅವಕಾಶ ಕಲ್ಪಿಸಿದ್ದಲ್ಲದೆ ಇನ್ನಿತರ ಅರ್ಹ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಂ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ. ಇವುಗಳಲ್ಲಿ ಕೊನೆಯದಾದ ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 5400 ಜನ ನೋಂದಣಿ ಮಾಡಿಕೊಂಡಿದ್ದು, ಅರ್ಹ ಫಲಾನುಭವಿಗಳು ಇದರ ಪ್ರಯೋಜನ ಪಡೆಯಲಿದ್ದಾರೆಂದು ತಿಳಿಸಿದರು.ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪ್ರವಾಸ ಕೈಗೊಂಡು ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆಹಾನಿ ವೀಕ್ಷಿಸಲಾಗಿದೆ. ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಜನರಿಗೆ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಹಾನಿಗೊಳಗಾದ 1.62 ಲಕ್ಷ ಹೆಕ್ಟೇರ್ ಕ್ಷೇತ್ರದ ವಿವಿಧ ಬೆಳೆಗಳಿಗೆ 1,62,719 ರೈತರಿಗೆ ಪ್ರಾಥಮಿಕ ಹಂತದಲ್ಲಿ ₹ 32.26 ಕೋಟಿ ಪರಿಹಾರ ಜಮಾ ಮಾಡಲಾಗಿದೆ ಎಂದು ಹೇಳಿದರು.
ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯರಾದ ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇ ಒ ಶಶಿಧರ ಕುರೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್ ಅಮರೇಶ ಪಮ್ಮಾರ ಇತರರು ಉಪಸ್ಥಿತರಿದ್ದರು.
ಚಾಲಕ ಕಂ ನಿವರ್ವಾಹಕರಿಗೆ ಬೆಳ್ಳಿ ಪದಕ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಾಗಲಕೋಟೆ ವಿಭಾಗದಲ್ಲಿ 5 ವರ್ಷಗಳವರೆಗೆ ಅಪಘಾತ ರಹಿತ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿ 11 ಚಾಲಕ ಕಂ ನಿರ್ವಾಹಕರಿಗೆ ಸುರಕ್ಷಾ ಚಾಲಕ ಎಂಬ ಗೌರವದೊಂದಿಗೆ ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು.