10, 11 ರಂದು ಜಿಲ್ಲಾ ದಸರಾ ಕ್ರೀಡಾಕೂಟ

KannadaprabhaNewsNetwork |  
Published : Sep 06, 2026, 01:30 AM IST
ಲಿಂಗದಹಳ್ಳಿ  ಗ್ರಾಮ ಪಂಚಾಯಿತಿ ಆವರಣದಲ್ಲಿ  ಪ್ರಜಾ ಸೇವಾ ಅಂದೋಲನ ಸಭೆಗೆ ಚಾಲನೆ ಕಾರ್ಯಕ್ರಮ | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 2026-27 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.10 ಮತ್ತು 11ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದೆ.

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 2026-27 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.10 ಮತ್ತು 11ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಆಯೋಜಿಸಿದೆ. ಈ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್‌ಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟ್‌ಬಾಲ್, ಕುಸ್ತಿ, ಷಟಲ್ ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ ಮತ್ತು ಆಯ್ಕೆಯ ಕ್ರೀಡೆಗಳು ಟೆನ್ನಿಸ್, ನೆಟ್‌ಬಾಲ್, ಈಜು, ಟೆಕ್ವಾಂಡೋ, ಜುಡೋ, ವುಷು ಮತ್ತು ಕರಾಟೆ ಸ್ಪರ್ಧೆಗಳನ್ನು ಆಯೋಜಿಸಿದೆ. ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ವೈಯುಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವೀತಿಯ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಮಾತ್ರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ. ಅರ್ಹತೆ ಪಡೆದ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ವೆಬ್‌ಸೈಟ್ https://dasaracmcup.in ಮೂಲಕ ಸೆ.8 ರೊಳಗಾಗಿ ಕಡ್ಡಾಯವಾಗಿ ಹೆಸರನ್ನು ನೋಂದಾಯಿಸಿಕೊಳ್ಳುವುದು. ಜುಡೋ ಆಯ್ಕೆ ಪ್ರಕ್ರಿಯೆಯು ಸೆ.11 ರಂದು ನಡೆಯಲಿದೆ. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರಯಾಣಭತ್ಯೆ ಮತ್ತು ದಿನಭತ್ಯೆ ಪಡೆಯಲು ನೆಹರೂ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಂಡು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ತಾಲೂಕುಗಳಿಂದ ಭಾಗವಹಿಸುವ ವಿಜೇತ ಕ್ರೀಡಾಪಟುಗಳಿಗೆ ಶಿವಮೊಗ್ಗಕ್ಕೆ ಬಂದುಹೋಗುವ ಸಾಮಾನ್ಯ ಪ್ರಯಾಣಭತ್ಯೆ ನೀಡಲಿದ್ದು ಮಧ್ಯಾಹ್ನದ ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರದಾನ
ಒಬ್ಬರ ರಕ್ತದಾನದಿಂದ ಮೂವರಿಗೆ ಜೀವದಾನ: ಡಾ.ಆನಂದ್‌