ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ದಸರಾ ಕ್ರೀಡಾಕೂಟ

KannadaprabhaNewsNetwork |  
Published : Sep 12, 2024, 01:46 AM IST
ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಪೂರ್ವಭಾವಿ ಸಭೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: 2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸುಮಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ: 2024-25 ನೇ ಸಾಲಿನ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ‌ ದಸರಾ ಕ್ರೀಡಾ ಕೂಟವನ್ನು ಮಹಿಳೆ ಹಾಗೂ ಪುರುಷರಿಗೆ ನಡಸಲಾಗುತ್ತಿದ್ದು, ಕ್ರೀಡಾಕೂಟವನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸುಮಾ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

2024-25 ನೇ ಸಾಲಿನ ತಾಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಆಯೋಜನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಈ ಕ್ರೀಡಾಕೂಟವು ಸೆಪ್ಟೆಂಬರ್ 27 ಮತ್ತು 28 ಎರಡು ದಿನಗಳ ಕಾಲ ನಡೆಯಲಿದೆ‌‌. ಸಮಾರಂಭದ ಉದ್ಘಾಟನೆಯನ್ನು ಶಿಷ್ಠಾಚಾರದಂತೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳನ್ನು ಆಹ್ವಾನಿಸಿ ಉದ್ಘಾಟಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ನೆಲಮಂಗಲದಲ್ಲಿ ತಾಲೂಕು ಮಟ್ಟದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದ್ದು, ಸೆಪ್ಟೆಂಬರ್ 25 ರಂದು ದೇವನಹಳ್ಳಿ (ಟೌನ್ ಕ್ರೀಡಾಂಗಣ), ದೊಡ್ಡಬಳ್ಳಾಪುರ (ಭಗತ್‌ಸಿಂಗ್ ಕ್ರೀಡಾಂಗಣ) ಹಾಗೂ ಹೊಸಕೋಟೆ (ಚನ್ನಬೈರೇಗೌಡ ಕ್ರೀಡಾಂಗಣ) ದಲ್ಲಿ ಏಕಕಾಲದಲ್ಲಿ ಚಾಲನೆಗೊಳ್ಳಲಿದೆ. ಸೆಪ್ಟೆಂಬರ್ 24 ರಂದು ನೆಲಮಂಗಲ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ನಡೆಯಲಿದೆ‌

ಎಂದು ತಿಳಿಸಿದರು.

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸಂಘಟನೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ದೈಹಿಕ ಶಿಕ್ಷಕರ ಸೇವೆ ಆಯೋಜನೆ, ಆರೋಗ್ಯ ಇಲಾಖೆ ವತಿಯಿಂದ ಆ್ಯಂಬುಲೆನ್ಸ್ ಮತ್ತು ವೈದ್ಯರ ವ್ಯವಸ್ಥೆ, ಜಿಲ್ಲಾ, ತಾಲೂಕು ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾ ಕೂಟದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಕ್ರಮ ವಹಿಸಿ ಸಮಾರಂಭದಲ್ಲಿ ಕುಡಿಯುವ ನೀರು, ಉಟೋಪಹಾರ ಕಲ್ಪಿಸಲು ಸಂಬಂಧಿಸಿದ‌ ಅಧಿಕಾರಿಗಳಿಗೆ‌ ಸೂಚಿಸಿದರು.

ಸಭೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ.ಜಯಲಕ್ಷ್ಮಿ, ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ರಮೇಶ್ ಸೇರಿದಂತೆ ಜಿಲ್ಲಾ‌ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಫೋಟೋ-

11ಕೆಡಿಬಿಪಿ3-

ದೊಡ್ಡಬಳ್ಳಾಪುರದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಪೂರ್ವಭಾವಿ ಸಭೆ ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌