ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಪಿಸಿಎಂಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಬೀರಳ್ಳ ಲಕ್ಕುಂದ ಗ್ರಾಮದ ಡಿ. ತೇಜಸ್ವಿನಿಯನ್ನು ಶಾಸಕ ಡಾ. ಮಂತರ್‌ಗೌಡ ಅವರ ಕಚೇರಿಯಲ್ಲಿ ಸನ್ಮಾನಿಸಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ಪಿಸಿಎಂಸಿ ಯಲ್ಲಿ 600ಕ್ಕೆ 591 ಅಂಕಗಳಿಸುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಬೀರಳ್ಳ ಲಕ್ಕುಂದ ಗ್ರಾಮದ ಡಿ. ತೇಜಸ್ವಿನಿಯನ್ನು ಶಾಸಕ ಡಾ. ಮಂತರ್ ಗೌಡ ಅವರು ಅವರ ಕಚೇರಿಯಲ್ಲಿ ಸನ್ಮಾನಿಸಿದರು.
ಇವರು ಶನಿವಾರಸಂತೆಯ ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಅಭ್ಯಾಸ ನಡೆಸಿದ್ದಾರೆ. ಇವರು ನಿವೃತ್ತ ಸೈನಿಕ ಹಾಗೂ ಕೃಷಿಕರಾದ ಎಲ್.ಎನ್. ಧರ್ಮಪ್ಪ ಹಾಗೂ ಕೆ.ಬಿ. ತಾರಾಮಣಿ ಪುತ್ರಿಯಾಗಿದ್ದಾರೆ.
---------------------------------------------
ಮನೆಗೆ ಹಾನಿ: ಉಪವಿಭಾಗಾಧಿಕಾರಿ ಭೇಟಿ, ಪರಿಶೀಲನೆ
ಕನ್ನಡಪ್ರಭವಾರ್ತೆ, ಸೋಮವಾರಪೇಟೆತಾಲೂಕಿನ ತಲ್ತಾರೆಶೆಟ್ಟಳ್ಳಿ ಗ್ರಾಮದ ಸುಶೀಲಾ ಬೋಪಯ್ಯ ಅವರ ಮನೆ ಗಾಳಿ ಮಳೆಯಿಂದ ಹಾನಿಯಾಗಿದ್ದು, ಸ್ಥಳಕ್ಕೆ ಜಿಲ್ಲಾ ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ ಭೇಟಿ ನೀಡಿ, ಪರಿಶೀಲಿಸಿದರು.
ಅಲ್ಲದೆ ಕುಂಬೂರು ಹಾಗು ಜಂಬೂರು ಗ್ರಾಮದಲ್ಲಿ ಮಳೆಹಾನಿ ಮನೆಗಳಿಗೆ ಭೇಟಿ ನೀಡಿ, ಜಿಲ್ಲಾಡಳಿತದಿಂದ ಸೂಕ್ತ ಪರಿಹಾರ ನೀಡುವ ಭರವಸೆಯನ್ನು ಸಂತ್ರಸ್ತರಿಗೆ ನೀಡಿದರು. ಈ ಸಂದರ್ಭ ತಹಸೀಲ್ದಾರ್ ಕೃಷ್ಣಮೂರ್ತಿ, ಕಂದಾಯ ಇಲಾಖೆಯ ಸಿಬ್ಬಂದಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.