11ರಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಾರ್ಯಾಗಾರ: ಸತೀಶ್ ನಾಯ್ಕ

KannadaprabhaNewsNetwork |  
Published : Feb 05, 2026, 02:45 AM IST
ಸಭೆ ನಡೆಸಿದರು | Kannada Prabha

ಸಾರಾಂಶ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿ ಕುಟುಂಬದಲ್ಲೂ ಸುಧಾರಣೆ ತಂದಿದ್ದು, ಈ ಯೋಜನೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿದೆ.

ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜನೆ ಕುರಿತ ಸಭೆ ಮತ್ತು ಪ್ರಗತಿ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಕಾರವಾರ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿ ಕುಟುಂಬದಲ್ಲೂ ಸುಧಾರಣೆ ತಂದಿದ್ದು, ಈ ಯೋಜನೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿದ್ದು, ಈ ಸಂಭ್ರಮದ ಬಗ್ಗೆ ಫೆ. 11ರಂದು ಹೊನ್ನಾವರದ ಗುಣವಂತೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜಿಸಲಾಗುವುದು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ಪಾಂಡುರಂಗ ನಾಯ್ಕ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜನೆ ಕುರಿತ ಸಭೆ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಾಗಾರದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಭಾಗವಹಿಸಲಿದ್ದು, ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಎಲ್ಲಾ ತಾಲೂಕಿನ ಫಲಾನುಭವಿಗಳು ಈ ಯೋಜನೆಗಳ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ ಎಂದರು.

ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಕಾರ್ಯಾಗಾರದ ಯಶಸ್ಸಿಗಾಗಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ನಾಗರಾಜ ಮುರ್ಡೇಶ್ವರ, ಜನಾರ್ದನ ಕುಪ್ಪ ದೇವಾಡಿಗ, ಪುರುಷೋತ್ತಮ ದೇವಪ್ಪ ನಾಯ್ಕ, ಸದಸ್ಯರಾದ ರಾಜೇಂದ್ರ ರಾಣೆ, ದೇವಿದಾಸ ನಾಗೇಶ ಶಾನಭಾಗ, ಅಣ್ಣಪ್ಪ ಮಹಾಬಲೇಶ್ವರ ನಾಯ್ಕ, ಪಾಂಡುರಂಗ ಕೆ ಗೌಡ, ರಿಯಾಜ್ ಅಹಮದ್ ಬಾಬುಸಾಬ್, ಸುಮಾ ರಾಜು ಉಗ್ರಾಣಕರ, ಅನಿಲ್ ಗೋವಿಂದ ದಂಡಗಲ್, ರಾಜಶೇಖರ ರುದ್ರಗೌಡ ಹಿರೇಮಠ, ರಾಜು ಮಂಜಪ್ಪ ನಾಯ್ಕ, ಅಶೋಕ ಕೃಷ್ಣ ಗೌಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವಕರು ಮೊಬೈಲ್‌ ಬಿಟ್ಟು ಕುಸ್ತಿ, ಕಬ್ಬಡ್ಡಿ ಆಟವಾಡಿ
ಕೆಜಿಐಎಸ್ 2.0 ಅನುಷ್ಠಾನಕ್ಕೆ ಅಧಿಕಾರಿಗಳ ಸಮನ್ವಯ ಅವಶ್ಯಕ: ರಾಜೇಶ ಎನ್.ಎಲ್.