ಕನ್ನಡಪ್ರಭ ವಾರ್ತೆ ಮಂಗಳೂರು
ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಉನ್ನತಾಧಿಕಾರಿಗಳೊಂದಿಗೆ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೃತ್ತಿ ಜೀವನದಲ್ಲಿ ಬರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವ ಕೌಶಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸನ್ನು ಸಾಧಿಸಲು ಏಕಾಗ್ರತೆ ಮತ್ತು ಸಂಕಲ್ಪ ಮುಖ್ಯ. ಕ್ಷಣಿಕ ಸುಖಗಳು ಜೀವನವನ್ನು ಹಾಳು ಮಾಡುತ್ತವೆ, ವ್ಯಸನ ಮತ್ತು ಗೊಂದಲಗಳಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್. ಮಾತನಾಡಿ, ಜೀವನವು ಅನೇಕ ಅಂಶಗಳ ಮಿಶ್ರಣವಾಗಿದೆ, ಅಲ್ಲಿ ಕಠಿಣ ಪರಿಶ್ರಮ ಮತ್ತು ಶಿಸ್ತು ನಿರ್ಣಾಯಕ. ವಿದ್ಯಾರ್ಥಿಗಳು ಯಶಸ್ಸನ್ನು ಸಾಧಿಸಲು ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಬೇಕು ಎಂದರು.
ಎಕ್ಸ್‌ಪರ್ಟ್ ಶಿಕ್ಷಣ ಸಮೂಹ ಸಂಸ್ಥೆಗಳ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್.ನಾಯಕ್, ಆರ್ಕಿಟೆಕ್ಟ್ ದೀಪಿಕಾ ಎ. ನಾಯಕ್, ಪ್ರಾಂಶುಪಾಲ ಡಾ.ಎನ್.ಕೆ.ವಿ. ವಿಜಯನ್ ಕರಿಪ್ಪಲ್, ಉಪಪ್ರಾಂಶುಪಾಲ (ಶೈಕ್ಷಣಿಕ) ಸುಬ್ರಹ್ಮಣ್ಯ ಉಡುಪ ಇದ್ದರು. ಉಪಪ್ರಾಂಶುಪಾಲೆ (ಆಡಳಿತ) ಧೃತಿ ವಿ. ಹೆಗ್ಡೆ ಸ್ವಾಗತಿಸಿ, ನಿರೂಪಿಸಿದರು.