ಮಲ್ಮ ಹಾಕಿ ಕ್ಲಬ್ ಕಕ್ಕಬ್ಬೆ ವತಿಯಿಂದ ಹಾಕಿ ಕೂರ್ಗ್ ಸಹಯೋಗದಲ್ಲಿ ಇಲ್ಲಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮೇ 15ರಂದು ಪ್ರಾರಂಭಗೊಂಡ ಜಿಲ್ಲಾ ಹಾಕಿ ಲೀಗ್ ನ ಟಾಪ್ 8 ತಂಡಗಳ ನಡುವಿನ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಭಾನುವಾರ ಜರುಗಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಮಲ್ಮ ಹಾಕಿ ಕ್ಲಬ್ ಕಕ್ಕಬ್ಬೆ ವತಿಯಿಂದ ಹಾಕಿ ಕೂರ್ಗ್ ಸಹಯೋಗದಲ್ಲಿ ಇಲ್ಲಿನ ಕೆಪಿಎಸ್ ಶಾಲೆಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮೇ 15ರಂದು ಪ್ರಾರಂಭಗೊಂಡ ಜಿಲ್ಲಾ ಹಾಕಿ ಲೀಗ್ ನ ಟಾಪ್ 8 ತಂಡಗಳ ನಡುವಿನ ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭ ಭಾನುವಾರ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ಎ.ಎಸ್. ಪೊನ್ನಣ್ಣ ಕಾರ್ಯಕ್ರಮ ಉದ್ಘಾಟಿಸಿದರು.
ಮಲ್ಮ ಹಾಕಿ ಕ್ಲಬ್ ಅಧ್ಯಕ್ಷ ಮಾದಂಡ ಅಪ್ಪಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಎಡಿಕೇರಿ ಪ್ರಸನ್ನ, ಹಾಕಿ ಕೂರ್ಗ್ ಅಧ್ಯಕ್ಷ ಪಳಗಂಡ ಲವ ಕುಮಾರ್, ಉಪಾಧ್ಯಕ್ಷ ಮಾಪಂಗಡ ಯಮುನಾ ಚಂಗಪ್ಪ, ಕಾರ್ಯದರ್ಶಿ ಚೇತನ್, ಬಾಚಮಾಂಡ ಲವ ಚಿಣ್ಣಪ್ಪ, ಕಲಿಯಂಡ ಸಂಪನ್ ಅಯ್ಯಪ್ಪ, ಕುಲ್ಲೇಟಿರ ಅರುಣ್ ಬೇಬ, ಅರೆಯಡ ಪವಿನ್ ಪೊನ್ನಣ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಅಂಜಪರವಂಡ ಕುಶಾಲಪ್ಪ ಸ್ವಾಗತಿಸಿ, ಅಜ್ಜೆಟ್ಟಿರ ವಿಕ್ರಂ ವೀಕ್ಷಕ ವಿವರಣೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.