ಸುಳ್ಯದಲ್ಲಿ‌ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ

KannadaprabhaNewsNetwork |  
Published : Jun 20, 2025, 12:34 AM IST
32 | Kannada Prabha

ಸಾರಾಂಶ

ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ‌ಕಾಮಗಾರಿಗಳನ್ನು ಉದ್ಘಾಟನೆಗೊಳಿಸಿ, ಸುಳ್ಯ‌ ನಗರ ಪಂಚಾಯಿತಿಯಲ್ಲಿ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಸುಳ್ಯಇಲ್ಲಿ ನಮ್ಮ ಶಾಸಕರು ಇಲ್ಲ. ಅನುದಾನ ಇಲ್ಲ ಎನ್ನುವ ಮಾತುಗಳು ಬೇಡ. ನಮ್ಮ ಸರ್ಕಾರ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡುವುದಿಲ್ಲ. ಸರ್ಕಾರದಿಂದ ಬರುವ ಎಲ್ಲ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಬರಬೇಕು. ಇಲ್ಲಿಯ ಪ್ರತಿನಿಧಿಯಾಗಿ ಅದನ್ನು ನಾನು ಕೊಡಿಸುತ್ತೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಬುಧವಾರ ಸುಳ್ಯದಲ್ಲಿ ವಿವಿಧ ಅಭಿವೃದ್ಧಿ ‌ಕಾಮಗಾರಿಗಳನ್ನು ಉದ್ಘಾಟನೆಗೊಳಿಸಿ, ಸುಳ್ಯ‌ ನಗರ ಪಂಚಾಯಿತಿಯಲ್ಲಿ ನಡೆದ ಹಕ್ಕುಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ, ಸುಳ್ಯದ ಅಭಿವೃದ್ಧಿ ಕುರಿತು ಸಚಿವರ ಮುಂದೆ ಬೇಡಿಕೆ ಇಟ್ಟರು. ಸುಳ್ಯದ ರೈತರ ಸಮಸ್ಯೆಗಳ ಪರಿಹಾರಕ್ಕೆ ವಿಶೇಷ ಪ್ಯಾಜೇಜ್ ನೀಡುವಂತೆ ಮನವಿ ಮಾಡಿಕೊಂಡರು.ನ.ಪಂ. ಅಧ್ಯಕ್ಷೆ ಶಶಿಕಲಾ ನೀರಬಿದಿರೆ ನಗರದ ಅಭಿವೃದ್ಧಿ ಕುರಿತು ರು.5 ಕೋಟಿ‌ ವಿಶೇಷ ಅನುದಾನದ ಬೇಡಿಕೆ ಮುಂದಿಟ್ಟರು.ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್‌ ಕುತ್ತಮೊಟ್ಟೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೃಷ್ಣಪ್ಪ ಜಿಗಣಿ, ಪಿ.ಸಿ.ಜಯರಾಂ, ಟಿ.ಎಂ. ಶಹೀದ್, ನ.ಪಂ. ಉಪಾಧ್ಯಕ್ಷ ಬುದ್ಧ‌ನಾಯ್ಕ್, ಸ್ಥಾಯಿ‌ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಸದಸ್ಯರಾದ ಎಂ.ವೆಂಕಪ್ಪ ಗೌಡ, ಉಮ್ಮರ್ ಕೆ.ಎಸ್., ಶರೀಫ್ ಕಂಠಿ, ಡೇವಿಡ್ ಧೀರಾ ಕ್ರಾಸ್ತ, ರಿಯಾಜ್ ಕಟ್ಟೆಕಾರ್, ರಾಜು ಪಂಡಿತ್, ಸಿದ್ದೀಕ್ ಕೊಕ್ಕೊ, ಶೀಲಾ ಕುರುಂಜಿ, ಭಾಸ್ಕರ ಪೂಜಾರಿ ದುಗಲಡ್ಕ, ನ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಎ.ಸಿ.‌ಸ್ಟೆಲ್ಲಾ ವರ್ಗೀಸ್, ತಹಸೀಲ್ದಾರ್ ಮಂಜುಳಾ, ನ.ಪಂ.‌ಮುಖ್ಯಾಧಿಕಾರಿ ಸುಧಾಕರ್ ಮೊದಲಾದವರು ವೇದಿಕೆಯಲ್ಲಿ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ