ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ ಪರಿಶೀಲಿಸಿದ ಬಳಿಕ ಗುಣಮಟ್ಟದ ಊಟೋಪಚಾರ ನೀಡುವಂತೆ ತಾಕೀತು ಮಾಡಿದರು.
ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿನೋತ್ ಪ್ರಿಯ ಅವರು ಗುರುವಾರ ಪಟ್ಟಣದ ಹಲವೆಡೆ ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ
ಪರಿಶೀಲಿಸಿದ ಬಳಿಕ ಗುಣಮಟ್ಟದ ಊಟೋಪಚಾರ ನೀಡುವಂತೆ ತಾಕೀತು ಮಾಡಿದರು.
ಬಳಿಕ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ₹7 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ
ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ
ಪರಿಶೀಲನೆ ನಡೆಸಿ ಕಾಮಗಾರಿ ಬಗ್ಗೆ ಸವಿವರ ಮಾಹಿತಿ ಪಡೆದುಕೊಂಡರಲ್ಲದೆ ಮಾರ್ಚ್ನಲ್ಲಿ ತ್ವರಿತಗತಿಯಲ್ಲಿ
ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದರು. ನಂತರ ಟಗರಪುರ ಗ್ರಾಮಕ್ಕೆ ತೆರಳಿ ಪಂಚಾಯ್ತಿ ಕಚೇರಿ ಹಾಗೂ ಗ್ರಂಥಾಲಯಗಳಿಗೂ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ವಿದ್ಯಾರ್ಥಿನಿಲಯ ಮಾರ್ಚ್ ನಲ್ಲಿ ಕಾಮಗಾರಿ ಪೂರ್ಣಗೊಂಡರೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ಸಾಲಿಗೆ ಇಲ್ಲಿಗೆ ಹಸ್ತಾಂತರಕ್ಕೆ ಸಹಕಾರಿಯಾಗಲಿದ್ದು ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ ಎಂದರು .
ಈ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮುನಿರಾಜು, ತಾಲೂಕು ಅಧಿಕಾರಿ ಕೇಶವಮೂರ್ತಿ, ತಾಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಪರಿಶಿಷ್ಟ ಪಂಗಡ ಇಲಾಖೆಯ ರಾಜೇಶ್ ಇನ್ನಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.