ಕನ್ನಡಪ್ರಭ ವಾರ್ತೆ ಮೈಸೂರು
ಜಯನಗರದ ಇಸ್ಕಾನ್ ನಲ್ಲಿರುವ ಶ್ರೀಧಾಮ ಹಾಲ್ ನಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕ್ರಿಮಿನಾಶಕ ಮಾರಾಟಗಾರರ ಸಂಘವು ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾರ್ಷಿಕ ಸಮಾವೇಶವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ರೈತರು ತಜ್ಞರನ್ನು ಸಂಪರ್ಕಿಸಿ ಅವರು ಹೇಳಿದ ಔಷಧಗಳನ್ನು ಖರೀದಿಸಲು ಅಂಗಡಿಗೆ ಬರುತ್ತಾರೆ. ಆಗ ಮಾರಾಟಗಾರರು ರೈತರು ಕೇಳಿದ ಔಷಧಿಯನ್ನು ಮಾತ್ರ ನೀಡಬೇಕು. ಅವರನ್ನು ದಾರಿ ತಪ್ಪಿಸಿ ಬೇರೆ ರೀತಿಯ ಔಷಧಗಳನ್ನು ನೀಡಬಾರದು ಎಂದು ಅವರು ಹೇಳಿದರು.ಯಾವುದೇ ವಸ್ತುಗಳನ್ನು ಮಾರಾಟ ಮಾಡಿದಾಗ ಅದಕ್ಕೆ ಸಂಬಂಧಿಸಿದ ಬಿಲ್ ನೀಡಬೇಕು. ಪ್ರತಿ ಅಂಗಡಿ ಮುಂಭಾಗದಲ್ಲಿ ಪ್ರತಿ ಉತ್ಪನ್ನದ ದರ ಪಟ್ಟಿ ಪ್ರದರ್ಶಿಸಬೇಕು. ಎಂ.ಆರ್.ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ಕಾಲಕಾಲಕ್ಕೆ ವ್ಯಾಪಾರ ಪರವಾನಗಿಯನ್ನು ನವೀಕರಿಸಬೇಕು ಎಂದರು.
ಚಾಮರಾಜನಗರ ಜಂಟಿ ಕೃಷಿ ನಿರ್ದೇಶಕ ಡಾ.ಎಸ್.ಎನ್. ಆಬೀದ್, ಮೈಸೂರು ವಿಭಾಗ ಜಾಗೃತ ಕೋಶ ಜಂಟಿ ಕೃಷಿ ನಿರ್ದೇಶಕ ಡಾ.ಕೆ. ಮಧುಸೂಧನ್, ತೋಟಗಾರಿಕೆ ಜಂಟಿ ನಿರ್ದೇಶಕ ಎಚ್.ಎಂ. ನಾಗರಾಜ್, ಸಂಘದ ಅಧ್ಯಕ್ಷ ಬಿ.ಪಿ. ಶಿವಪ್ರಕಾಶ್, ಕಾರ್ಯದರ್ಶಿ ಕೆ.ಸಿ. ಸತೀಶ್ ಹಾಗೂ ಪದಾಧಿಕಾರಿಗಳು ಇದ್ದರು.