ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ಹಾಗೂ ಮಹಿಳಾ ಮ್ತತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಶುಕ್ರವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಬ್ಬಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗಾಗಿ ಕೊಡಗು ಜಿಲ್ಲೆಯ ಪಾರಂಪರಿಕ ಸಂಸ್ಕೃತಿ ಕುರಿತು ನೃತ್ಯ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜುಳಾ ಮಾತನಾಡಿ, ಮಕ್ಕಳಿಗೆ ಬದುಕುವ ಹಕ್ಕು ಮತ್ತು ಉತ್ತಮ ಮಟ್ಟದ ಆರೋಗ್ಯ, ಬಾಲ್ಯದಲ್ಲಿ ಆರೈಕೆ ಮತ್ತು ಅಭಿವೃದ್ಧಿ, ಬಿಡುವು, ಮನರಂಜನೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಪ್ರಮುಖವಾದ ಅಂಶಗಳಾಗಿದ್ದು, ಇವುಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿರುತ್ತವೆ ಎಂದರು.