ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್ ಕಾಲೇಜಿನ ೧೨೦ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ ದಕ್ಷಿಣ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜು ತಂಡವು ಸಮಗ್ರ ಪ್ರಶಸ್ತಿಗೆ ಭಾಜನವಾಗಿದೆ.
ಪುರುಷ ಮತ್ತು ಮಹಿಳಾ ಸೇರಿದಂತೆ ಎರಡೂ ವಿಭಾಗಗಳ ಅಥ್ಲೆಟಿಕ್ಸ್‌ನಲ್ಲಿ ಒಟ್ಟು ೨೩ ಚಿನ್ನ, ೧೦ ಬೆಳ್ಳಿ, ೨ ಕಂಚಿನ ಪದಕಗಳೊಂದಿಗೆ ಒಟ್ಟು ೩೫ ಪದಕ, ಕುಸ್ತಿಯಲ್ಲಿ ೧೬ ಚಿನ್ನ, ೮ ಬೆಳ್ಳಿ, ೮ ಕಂಚಿನ ಪದಕಗಳೊಂದಿಗೆ ಒಟ್ಟು ೩೨ ಪದಕ, ಯೋಗದಲ್ಲಿ ೫ ಚಿನ್ನ, ೪ ಬೆಳ್ಳಿ, ೨ ಕಂಚಿನ ಪದಕಗಳೊಂದಿಗೆ ಒಟ್ಟು ೧೧ ಪದಕ ಹಾಗೂ ಕಬಡ್ಡಿ, ಬಾಲ್ ಬ್ಯಾಡ್ಮಿಂಟನ್ ಮತ್ತು ಖೋ-ಖೋ ಪಂದ್ಯಾಟಗಳ ಪುರುಷ ಮತ್ತು ಮಹಿಳಾ ವಿಭಾಗಗಳಲ್ಲಿ ಪ್ರಥಮ ಸ್ಥಾನ ಹಾಗೂ ವಾಲಿವಾಲ್ ಪುರುಷರ ವಿಭಾಗದಲ್ಲಿ ದ್ವಿತೀಯ, ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಆಳ್ವಾಸ್ ಪಡೆದುಕೊಂಡಿದೆ.
ಮಂಗಳೂರು, ಉಡುಪಿ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಳ್ವಾಸ್ ಕಾಲೇಜಿನ ೧೨೦ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.