ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಾನಂದಸ್ವಾಮಿ
ನಗರದಲ್ಲಿ ಇದೇ ಫೆ.23 ರಂದು ಆಯೋಜಿಸಿರುವ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ. ಸಿ.ಶಿವಾನಂದಸ್ವಾಮಿ ಸೂಚಿಸಿದರು.
ನಗರದ ತಾಪಂನಲ್ಲಿ ಗುರುವಾರ ಗ್ಯಾರಂಟಿ ಪ್ರಾಧಿಕಾರ ಅನುಷ್ಟಾನದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಂಚ ಗ್ಯಾರಂಟಿ ಕಾರ್ಯಾಗಾರ ಕುರಿತ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದರು. ಫೆ.23ರ ಬೆಳಗ್ಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಕಾರ್ಯಾಗಾರದ ಸಮಾವೇಶನ ನಡೆಯಲಿದೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆಜಾದ್‌ಪಾರ್ಕ್ ವೃತ್ತ ದಿಂದ ಕುವೆಂಪು ಕಲಾಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಹಾಗೂ ಫಲಾನುಭವಿಗಳೊಂದಿಗೆ ಸಂವಾದ ನಡೆಯಲಿದೆ ಎಂದು ತಿಳಿಸಿದರು.ಕಾರ್ಯಾಗಾರದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಎಲ್ಲಾ ತಾಲೂಕಿನ ಅಧ್ಯಕ್ಷರು ಪೂರ್ವಭಾವಿ ಸಭೆ ನಡೆಸಿ ಮುಂದಿನ ಕಾರ್ಯಕ್ರಮಕ್ಕೆ ಸಜ್ಜಾಗಿದ್ದಾರೆ. ಅಂದಿನ ಕಾರ್ಯಕ್ರಮ ದಲ್ಲಿ ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ರೇವಣ್ಣ, ಉಪಾಧ್ಯಕ್ಷರು, ಮಂತ್ರಿಗಳು, ಶಾಸಕರು ಭಾಗವಹಿಸಲಿದ್ದಾರೆ ಎಂದರು.
ತಾಲೂಕು ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಅನ್ಸರ್ ಆಲಿ ಮಾತನಾಡಿ ಪಡಿತರ ಚೀಟಿಯಲ್ಲಿ ಸಮಸ್ಯೆ ಕಂಡುಬಂದಲ್ಲಿ ಗ್ಯಾರಂಟಿ ಅಧ್ಯಕ್ಷರ ಕಚೇರಿ ಅಥವಾ ತಾಲೂಕು ಆಡಳಿತಕ್ಕೆ ಭೇಟಿ ನೀಡಿ ಪರಿಹರಿಸಲು ಅವಕಾಶವಿದೆ. ಹೀಗಾಗಿ ಫಲಾನು ಭವಿಗಳು ಗೊಂದಲಕ್ಕೆ ಒಳಗಾಗಬಾರದು. ಸರ್ಕಾರದ ಗ್ಯಾರಂಟಿ ಸವಲತ್ತು ಸಮರ್ಪಕವಾಗಿ ಒದಗಿಸಲಾಗುವುದು ಎಂದರು.
ಫೋಟೋ