ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದ ಜಿ.ಪಂ. ಮಿನಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಮಿತಿಯಿಂದ ಆಯೋಜಿಸಿದ್ಧ ಕಾರ್ಯಾಗಾರದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು,
ಕಾರ್ಯಾಗಾರದಲ್ಲಿ ಜಿಲ್ಲೆಯ ಐದು ಗ್ಯಾರಂಟಿ ಯೋಜನೆಯ ಆಯ್ದ ಫಲಾನುಭವಿಗಳ ಸಂವಾದ, ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ, ಉಪಾಧ್ಯಕ್ಷ ಅಮರನಾಥ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ, ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್.ಎಸ್.ಕೀರ್ತನಾ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಪಂಚ ಗ್ಯಾರಂಟಿ ಮೂಲಕ ರಾಜ್ಯ ಸರ್ಕಾರ ಈವರೆಗೆ 2175 ಕೋಟಿ ರು. ಮೊತ್ತದ ಸೌಲಭ್ಯವನ್ನು ನೀಡಿದೆ. ಒಟ್ಟಾರೆ ಜಿಲ್ಲೆಯ ಜನರ ಆರ್ಥಿಕ ಸಂಪನ್ಮೂಲ ಹೆಚ್ಚಳಗೊಳಿಸುವ ಜತೆಗೆ ಆರ್ಥಿಕ ಸಂಚಲನ ಮೂಡಿಸುವಲ್ಲಿ ಗ್ಯಾರಂಟಿ ಯೋಜನೆಗಳು ಫಲಪ್ರದವಾಗಿವೆ ಎಂದು ಹೇಳಿದರು.
ಮೆಸ್ಕಾಂ ಕಾರ್ಯಪಾಲಕ ಅಭಿಯಂತರ ಮಂಜುನಾಥ್ ಮಾತನಾಡಿ, ಜಿಲ್ಲೆಯ 3.06 ಲಕ್ಷ ಮೀಟರ್‌ಗಳಿಗೆ ಸಂಬಂಧಿಸಿದಂತೆ ಒಟ್ಟು 10 ಲಕ್ಷ ಫಲಾನುಭವಿಗಳಿಗೆ ಸರ್ಕಾರ ಉಚಿತ ವಿದ್ಯುತ್ ಸರಬರಾಜು ಮಾಡಿದ್ದು, 327 ಕೋಟಿ ರು, ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸಮೀವುಲ್ಲಾ, ಡೈರಿ ಮಂಜಣ್ಣ, ಹವ್ವಳ್ಳಿ ಕೃಷ್ಣೇಗೌಡ, ಚಂದ್ರಮೌಳಿ, ಹೇಮಾವತಿ ಸೇರಿದಂತೆ 9 ತಾಲೂಕು ಅಧ್ಯಕ್ಷರು, ಜಿಲ್ಲಾ ಸಮಿತಿ ಪದಾಧಿಕಾರಿಗಳು ಇದ್ದರು.