ಪತ್ರಕರ್ತರ ಜಿಲ್ಲಾ ಮಟ್ಟದ ಕೆಸರುಗದ್ದೆ ಕ್ರೀಡಾಕೂಟ

KannadaprabhaNewsNetwork |  
Published : Jul 21, 2026, 02:45 AM IST
 | Kannada Prabha

ಸಾರಾಂಶ

ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಗದ್ದೆಯಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ನಾಟಿ ಬಾಯ್ಸ, ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.

ಮಡಿಕೇರಿ: ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್‌ಮನೆಯ ಮಲ್ಲನ ಬೆಳ್ಯಪ್ಪ ಗದ್ದೆಯಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ನಾಟಿ ಬಾಯ್ಸ, ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.

ಹ್ಯಾಂಡ್ ಬಾಲ್‌ನ ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ನಾಟಿ ಬಾಯ್ಸ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಹಗ್ಗಜಗ್ಗಾಟ ಪಂದ್ಯದಲ್ಲಿ ಕಿಶೋರ್ ರೈ ನಾಯಕತ್ವದ ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು.

ಲೀಗ್ ಮಾದರಿಯಲ್ಲಿ ನಾಟಿ ಬಾಯ್ಸ, ಯಂಗ್ ಸ್ಪೈಡರ್ಸ್, ಮಡ್ ಕಮಾಂಡೋಸ್, ಮಡ್ ಫೀಲ್ಡರ್ಸ್, ಮಡ್ ಬಾಯ್ಸ, ರೈತ ಮಕ್ಕಳು ಸೇರಿದಂತೆ 6 ತಂಡಗಳು ಸೆಣಸಾಟ ನಡೆಸಿತ್ತು.ನಂತರ ನಡೆದ 40 ವರ್ಷ ವಯಸ್ಸಿನೊಳಗಿನವರ ವಿಭಾಗದಲ್ಲಿ ನಡೆದ ಓಟದ ಸ್ಪರ್ಧೆಯಲ್ಲಿ ಇಸ್ಮಾಯಿಲ್ ಕಂಡಕರೆ (ಪ್ರ), ದಿವಾಕರ್ (ಜಾಕಿ)(ದ್ವಿ), ಸವಾದ್ ಉಸ್ಮಾನ್ ತೃತೀಯ ಸ್ಥಾನ ಪಡೆದರು. 40 ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ನಡೆದ ಗೋಪಾಲ್ ಸೋಮಯ್ಯ(ಪ್ರ), ಚೆನ್ನನಾಯಕ್(ದ್ವಿ), ಚೀರಂಡ ಚಂಗಪ್ಪ ತೃತೀಯ ಸ್ಥಾನಪಡೆದರು.

ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕ ದಿನೇಶ್, ರಕ್ಷಿತ್ ಕಟ್ರತನ, ದೇವಂಗೋಡಿ ಜಿತು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರೆ, ಬಾಚರಣಿಯಂಡ ಶಶಾಂಕ್ ಸೋಮಯ್ಯ, ಶ್ರುತನ್ ಸುಬ್ಬಯ್ಯ ಸ್ಕೋರರ್ ಆಗಿ ಕಾರ್ಯನಿರ್ವಹಿಸಿದರು.

ಪ್ರದರ್ಶನ ಪಂದ್ಯ: ಉದ್ಘಾಟನಾ ಕಾರ್ಯಕ್ರಮದ ನಂತರ ಪತ್ರಕರ್ತರು ಮತ್ತು ಫಾರ್ಮರ್ಸ್ ಕ್ಲಬ್ ನಡುವೆ ನಡೆದ ಹಗ್ಗಜಗ್ಗಾಟದ ಪ್ರದರ್ಶನ ಪಂದ್ಯದಲ್ಲಿ ಫಾರ್ಮರ್ಸ್ ಕ್ಲಬ್ ತಂಡ ಗೆಲುವು ಸಾಧಿಸಿತು. ವಿಜೇತ ತಂಡಕ್ಕೆ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಯಿತು.

ಸಮಾರೋಪ ಸಮಾರಂಭ: ತಾಳತ್ತಮನೆಯ ಸಮೀಪದ ಸ್ವಾಗತ್ ಕನ್ವೆಷನಲ್ ಹಾಲ್‌ನಲ್ಲಿ ನಡೆದ ಸಮಾರೋಪ ಸಮಾರಂಭ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ ಮಾತನಾಡಿ, ನಿರಂತರ ಕೆಲಸದ ಒತ್ತಡದ ನಡುವೆಯೂ ಕ್ರೀಡಾಕೂಟಗಳು ಮನೋಲ್ಲಾಸ ನೀಡುತ್ತವೆ ಎಂದು ಹೇಳಿದರು.

ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ ಅವರು ಮಾತನಾಡಿ, ಸುದ್ದಿ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾಂಗಣದಲ್ಲೂ ಪತ್ರಕರ್ತರು ಪ್ರತಿಭೆ ತೋರಿಸುತ್ತಿರುವುದು ಶ್ಲಾಘನೀಯ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ ಮಾತನಾಡಿ, ವೃತ್ತಿ ಬದುಕಿನ ಒತ್ತಡ ಮರೆತು, ವರ್ಷಕ್ಕೊಮ್ಮೆ ಇಂತಹ ಕ್ರೀಡಾಕೂಟಗಳಲ್ಲಿ ಪತ್ರಕರ್ತರು ತಪ್ಪದೇ ಭಾಗವಹಿಸಬೇಕೆಂದು ಹೇಳಿದರು.ಕಾಂಗ್ರೆಸ್ ಮುಖಂಡ ಜಾನ್ಸನ್ ಪಿಂಟೋ ಮಾತನಾಡಿ, ಪ್ರಕೃತಿ ವಿಕೋಪ ಮತ್ತು ಕೋವಿಡ್‌ ನಂತಹ ಸಂಕಷ್ಟದ ಸಂದರ್ಭಗಳಲ್ಲೂ ಕೊಡಗಿನ ಪತ್ರಕರ್ತರು ಜನಪರವಾಗಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದರು.ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ, ಮಲ್ಲನ ಆನಂದ್, ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ಮತ್ತು ಸಂಚಾಲಕರಾದ ಆರ್.ಆರ್.ಮುನೋಜ್ ಇದ್ದರು.ಕೊಡಗು ಪ್ರೆಸ್ ಕ್ಲಬ್‌ನ ಹಿರಿಯ ಉಪಾಧ್ಯಕ್ಷ ನವೀನ್ ಡಿಸೋಜ ಸ್ವಾಗತಿಸಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಜೆ.ರಾಕೇಶ್ ನಿರೂಪಿಸಿ, ವಂದಿಸಿದರು.

ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಇಂತಹ ಕ್ರೀಡಾಕೂಟಗಳು ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುತ್ತವೆ ಎಂದರು. ತಾಳತ್ತಮನೆ ಫಾರ್ಮರ್ಸ್ ಕ್ಲಬ್ ಅಧ್ಯಕ್ಷ ಜನನ್ ಪೊನ್ನೆಟ್ಟಿ ಮಾತನಾಡಿದರು.ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮಸ್ಥರೇ ಅಂಪೈರ್‌ಗಳಾಗಿ ಕಾರ್ಯನಿರ್ವಹಿಸಿರುವುದು ವಿಶೇಷ ಎಂದರು.ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕ ಹಾಗೂ ತೀರ್ಪುಗಾರರಾದ ದಿನೇಶ್ ಮಾತನಾಡಿ, ಆಟದಲ್ಲಿ ಕ್ರೀಡಾಸ್ಫೂರ್ತಿ ಇರಬೇಕು ಎಂದರು.

ಸಮಾಜ ಸೇವಕ ಹಾಗೂ ಬೆಳೆಗಾರರಾದ ಮಲ್ಲನ ಆನಂದ್ ಕ್ರೀಡಾಕೂಟ ಉದ್ಘಾಟಿಸಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶಾಲ್ ಮಾರ್ಟ್ ವ್ಯವಸ್ಥಾಪಕ ಕೆ.ಕೆ.ಗಿರೀಶ್, ಬೆಳೆಗಾರ ಚೆರಿಯಮನೆ ಪ್ರಸಾದ್, ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್, ಕ್ರೀಡಾ ಸಂಚಾಲಕ ಸಂತೋಷ್ ರೈ, ಸ್ಟ್ಯಾನ್ಲಿ ಡೇವಿಡ್ ಉಪಸ್ಥಿತರಿದ್ದರು.ಕೊಡಗು ಪ್ರೆಸ್ ಕ್ಲಬ್‌ನ ನಿದೇರ್ಶಕ ಸಿಂಗಿ ಸತೀಶ್ ಪ್ರಾರ್ಥಿಸಿದರು. ಸದಸ್ಯ ಚಂದ್ರಮೋಹನ್ ಸ್ವಾಗತಿಸಿದರು. ಕೊಡಗು ಪ್ರೆಸ್ ಕ್ಲಬ್‌ನ ಸದಸ್ಯ ಕಿಶೋರ್ ರೈ ನಿರೂಪಿಸಿ, ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ಆರ್.ಆರ್.ಮನೋಜ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಂತ್ರಜ್ಞಾನಕ್ಕಿಂತ ಓದು ಮಹತ್ವದ್ದು: ಸುನಿಲ್ ಕುಮಾರ್
ಜುಲೈ ಕೊನೆಯ ವಾರ ‘ರಾಷ್ಟ್ರೀಯ ಪತಂಗ ಸಪ್ತಾಹ’