ಜಿಲ್ಲಾಮಟ್ಟದ ಖೋ ಖೋ ಪಂದ್ಯ: ಬೇನಾಳ ಶಾಲೆ ಪ್ರಥಮ

KannadaprabhaNewsNetwork |  
Published : Oct 11, 2024, 11:54 PM IST
10 ಆಲಮಟ್ಟಿ:1 | Kannada Prabha

ಸಾರಾಂಶ

ಆಲಮಟ್ಟಿ ಸಮೀಪದ ಬೇನಾಳ ಆರ್.ಸಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಖೋಖೋ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಸಮೀಪದ ಬೇನಾಳ ಆರ್.ಸಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಜರುಗಿದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಖೋಖೋ ಕ್ರೀಡಾಕೂಟದಲ್ಲಿ ಜಯ ಸಾಧಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ.

ಪಂದ್ಯಾವಳಿಯಲ್ಲಿ ಅತ್ಯುತ್ತಮ ಸಾಧನೆ ತೋರಿದ ವಿಜೇತ ತಂಡಕ್ಕೆ ಗ್ರಾಮಸ್ಥರು, ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಲಾಳಶೀರಿ, ವಿಜಯಪುರ ನಗರ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಜೆ.ಬಿರಾದಾರ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಂ.ಪಾಟೀಲ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಎಸ್.ಅವಟಿ, ನಿಡಗುಂದಿ ತಾಲೂಕಿನ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರ ಎಸ್.ಎಂ.ಪಾಟೀಲ, ವಿಜಯಪುರ ಜಿಲ್ಲಾ ಕೋಕೋ ಸಂಸ್ಥೆಯ ಗೌರವ ಅಧ್ಯಕ್ಷ ವೀರೇಶ ಗದಗ, ಅಧ್ಯಕ್ಷ ನಾಗಯ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಗೌಡರ, ವೀರೇಶ ಸೇರಿದಂತೆ ಸದಸ್ಯರು ಖೋಖೋ ಪಂದ್ಯಾಟದಲ್ಲಿ ಜಯ ದಾಖಲಿಸಿ ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ಶುಭ ಹಾರೈಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ಬಡಾವಣೆಯ ಸಂತ್ರಸ್ತ 12 ಕುಟುಂಬಕ್ಕೆ ಮನೆ ಹಂಚಿದ ರಾಜ್ಯ ಸರ್ಕಾರ
ಹಾಲ್‌ ಟಿಕೆಟ್‌ ಸಿಗದೆ 25 ವಿದ್ಯಾರ್ಥಿಗಳು ಪರೀಕ್ಷೆ ವಂಚಿತ