ಕನ್ನಡಪ್ರಭ ವಾರ್ತೆ ರಾಯಚೂರು
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ಬೆಳಗ್ಗೆ ಲಿಂಗಸುಗೂರು ಪಟ್ಟಣದಲ್ಲಿ ವೇದಿಕೆ ತನಕ ಮೆರವಣಿಗೆ ಜರುಗಲಿದೆ. ನಂತರ ಜರುಗಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದು, ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಸಚಿವ ಎನ್.ಎಸ್.ಬೋಸರಾಜು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಲಿದ್ದಾರೆ. ಖಾಸಗಿ ಸುದ್ದಿ ವಾಹಿನಿ ಸಂಪಾದಕ ಬಿ.ಎಂ.ಹನೀಫ್ ಅತಿಥಿ ಉಪನ್ಯಾಸ ನೀಡಲಿದ್ದು, ಜಿಲ್ಲೆ ಸಂಸದರು,ಶಾಸಕರು, ಎಂಎಲ್ಸಿಗಳು, ವಿವಿಧ ನಿಗಮ ಮಂಡಳಿಗಳ,ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಡಿಸಿ,ಸಿಇಒ,ಎಸ್ಪಿ ಸೇರಿ ಅನೇಕರು ಭಾಗವಹಿಸಲಿದ್ದಾರೆ ಎಂದರು.ವಾರ್ಷಿಕ ಪ್ರಶಸ್ತಿ: ಪ್ರಸಕ್ತ ಸಾಲಿನ ವಾರ್ಷಿಕ ಪ್ರಶಸ್ತಿಯಲ್ಲಿ ಇಬ್ಬರಿಗೆ ಜೀವಮಾನ ಸಾಧನೆ ಉಳಿದಂತೆ 10 ಜನ ಪತ್ರಕರ್ತರು, ಒಬ್ಬ ಪತ್ರಿಕಾ ವಿತರಕ ಸೇರಿ ಒಟ್ಟು 11 ಜನರಿಗೆ ಹಲವರು ನೀಡಿದ ದೇಣಿಗೆಯ ಸ್ಮರಣಾರ್ಥ ಕೊಡುವ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಸಮಿತಿ ಉಪಾಧ್ಯಕ್ಷ ಶಿವಪ್ಪ ಮಡಿವಾಳ, ಪ್ರಧಾನ ಕಾರ್ಯದರ್ಶಿ ಪಾಷಾ ಹಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದಯ್ಯಸ್ವಾಮಿ ಕುಕುನೂರು ಇದ್ದರು.