ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆ ಹಾಗೂ ಶಿಕ್ಷಣದಲ್ಲಿ ಯಾವುದೇ ಜಾತಿ ವ್ಯವಸ್ಥೆಗೆ ಅವಕಾಶವಿಲ್ಲ. ಕ್ರೀಡೆಗೆ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಇದೆ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಬೇಕು. ಸಾರ್ವಜನಿಕರ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಕೊಡುವುದರ ಜೊತೆಗೆ ನಿಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಅವರು ಹೇಳಿದರು.ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ ಅಧಿಕಾರಿಗಳು ಕಾರ್ಯ ಕ್ಷಮತೆಯನ್ನು ಹೆಚ್ಚಿಸುವ ಸಲುವಾಗಿ ಸರ್ಕಾರಿ ನೌಕರರ ಕ್ರೀಡೆಯನ್ನು ಆಯೋಜಿಸಲಾಗಿದ್ದು, ಎಲ್ಲಾ ಅಧಿಕಾರಿಗಳು ಕ್ರೀಡೆಯಲ್ಲಿ ಭಾಗವಹಿಸಬೇಕು. ಪ್ರತಿದಿನ ಅಧಿಕಾರಿಗಳು ಯಾವುದಾರರು ಕ್ರೀಡೆಯಲ್ಲಿ ತಮ್ಮನ್ನು ತಾವು ತೊಗಡಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿ ಕೊಳ್ಳುವುದರಿಂದ ದೇಹದ ಎಲ್ಲಾ ಅಂಗಗಳಿಗೆ ಆರೋಗ್ಯ ದೊರೆಯುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಯೋಗ, ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ಪ್ರತಿಯೊಬ್ಬ ಅಧಿಕಾರಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು, ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡರೆ ಮನಸ್ಸಿಗೂ ದೇಹಕ್ಕೂ ನೆಮ್ಮದಿ ದೊರೆಯುತ್ತದೆ. ನೌಕರರು ಅನುಭವಿಸುವ ಮಾನಸಿಕ ಒತ್ತಡ ಕಡಿಮೆ ಮಾಡುತ್ತದೆ. ಆದ್ದರಿಂದ ಅಧಿಕಾರಿಗಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ಮಾನಸಿಕ ಸ್ಥಿತಿಯೂ ದೈಹಿಕ ಆರೋಗ್ಯವೂ ಉತ್ತಮವಾಗುತ್ತದೆ ಎಂದು ಅವರು ಹೇಳಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಡಾ.ಸಿ.ಬಿ. ಅರುಣಕುಮಾರ ಸ್ವಾಗತಿಸಿದರು. ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ರಾಜ್ಯ ಉಪಾಧ್ಯಕ್ಷ ಜೆ. ಗೋವಿಂದರಾಜು, ರಾಜ್ಯ ಕಾರ್ಯದರ್ಶಿ ಎಂ.ಕೆ. ಗಣೇಶ್, ರಾಜ್ಯ ಪರಿಷತ್ ಸದಸ್ಯರು ಹಾಗೂ ರಾಜ್ಯ ಜಂಟಿ ಕಾರ್ಯದರ್ಶಿ ಡಿ. ಮಾಲೇಗೌಡ, ವಿಭಾಗೀಯ ಉಪಾಧ್ಯಕ್ಷ ಮಾಲಂಗಿ ಸುರೇಶ್, ರಾಜ್ಯ ಕಾರ್ಯದರ್ಶಿ ಜಯಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾದೇವ, ರಾಜ್ಯ ಪರಿಷತ್ ನ ಸದಸ್ಯರಾದ ರಘು. ಎಸ್, ರೇವಣ್ಣ ರಾಘವೇಂದ್ರ ಮೊದಲಾದವರು ಇದ್ದರು.