ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಈ ಕುರಿತು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಸರ್ಕಾರಿ ನೌಕರರು ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಈ ಬಾರಿ ಸಂಪೂರ್ಣವಾಗಿ ಆನ್‍ಲೈನ್ ಮೂಲಕವೇ ನೋಂದಣಿಗೆ ಅವಕಾಶ ನೀಡಲಾಗಿದ್ದು, ಈಗಾಗಲೇ ಸುಮಾರು 2045 ಸರ್ಕಾರಿ ನೌಕರರು ಆನ್‍ಲೈನ್ ಮೂಲಕ ವಿವಿಧ ಕ್ರೀಡೆಗಳಲ್ಲಿ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಕ್ರೀಡಾಕೂಟದ ದಿನದಂದು ಬರುವಂತಹ ಯಾವುದೇ ಸರ್ಕಾರಿ ನೌಕರರಿಗೆ ನೇರ ನೋಂದಣಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.
ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಸರ್ಕಾರಿ ನೌಕರರಿಗೆ ವಿಶೇಷ ಟೀ ಶರ್ಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ನೌಕರರು ಕಡ್ಡಾಯವಾಗಿ ತಮ್ಮ ಇಲಾಖೆಯ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕು. ಆನ್‍ಲೈನ್ ನೋಂದಣಿ ಮಾಡಿಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಮಾತ್ರ ಎರಡು ದಿನಗಳ ವಿಶೇಷ ರಜೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜ.29ರಂದು ಸಂಜೆ 6ಕ್ಕೆ ಸಂಕ್ರಾಂತಿ ಸಂಭ್ರಮ-ಸುಗ್ಗಿಯ ಸಿರಿ ಎನ್ನುವ ವಿನೂತನ ಮನೋರಂಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಮಾಲತೇಶ್ ಮುದ್ದಜ್ಜಿ ತಿಳಿಸಿದರು. ಜೀ-ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಗಾಯನ ಕಲಾವಿದ ಕಂಬದ ರಂಗಯ್ಯ ಹಾಗೂ ಸಂಗಡಿಗರಿಂದ ಸಂಗೀತ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಇರುತ್ತದೆ. ನೆನಪಿರಲಿ ಚಿತ್ರದ ನಾಯಕ ಪ್ರೇಮ್ ಅವರು ವಿಶೇಷ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಹೆಚ್ಚಿನ ನೌಕರರು ರೈತಾಪಿ ಕುಟುಂಬದಿಂದ ಬಂದವರಾದ್ದರಿಂದ ಅವರಿಗೆ ಹಳೆಯ ನೆನಪುಗಳ ಮರುಕಳಿಸಲು ಕಾರ್ಯಕ್ರಮಕ್ಕೆ ಆಗಮಿಸುವ ಸುಮಾರು 5 ಸಾವಿರ ಜನ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ಜೋಳದ ರೊಟ್ಟಿ, ಸಜ್ಜೆ ರೊಟ್ಟಿ ಮತ್ತು ಎಣ್ಣೆಗಾಯಿ ಪಲ್ಯದಂತಹ ಗ್ರಾಮೀಣ ಶೈಲಿಯ ಊಟವನ್ನು ಎಲ್ಲರಿಗೂ ಉಚಿತವಾಗಿ ನೀಡಲಾಗುವುದು ಎಂದರು.ಜಿಲ್ಲಾಮಟ್ಟದ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮಮಂಡಳಿ ಅಧ್ಯಕ್ಷರು, ಜಿಲ್ಲಾಮಟ್ಟದ ಅಧಿಕಾರಿಗಳಾದ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಎಲ್ಲಾ ವರ್ಗದ ನೌಕರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಎ.ಮಲ್ಲಿಕಾರ್ಜುನ, ಜಿಲ್ಲಾ ಉಪಾಧ್ಯಕ್ಷ ಹೆಚ್.ಬಿ.ಪೂಜಾರ್, ಹಿರಿಯೂರು ತಾಲೂಕು ಅಧ್ಯಕ್ಷ ಆರ್.ರಮೇಶ್, ರಾಜ್ಯ ಪರಿಷತ್ ಸದಸ್ಯೆ ಡಾ.ಬಿ.ಟಿ ಲೋಲಾಕ್ಷಮ್ಮ ಇದ್ದರು.