ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಉತ್ಸವ ಮತ್ತು ಯುವಜನೋತ್ಸವ- 2024ರ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶಭಕ್ತಿ ಮೂಡಿಸುವ ಉದ್ದೇಶಭಾರತದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತಕಾಲದಲ್ಲಿ ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸುಕೊಳ್ಳುವ ನಿಟ್ಟಿನಲ್ಲಿ ಯುವಜನರಿಗೆ ದೇಶ ಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿ 15- 29 ವರ್ಷ ವಯೋಮಿತಿ ಹೊಂದಿರುವ ಯುವಜನರ ಪ್ರತಿಭೆಗಳನ್ನು ಪ್ರದರ್ಶಿಸಲು ''''ಯುವಶಕ್ತಿ ಸೇ ಜನ ಭಾಗಿದಾರಿ’ ಎಂಬ ಶೀರ್ಷಿಕೆಯಡಿ ಜಿಲ್ಲಾ ಮಟ್ಟದ ಯುವ ಉತ್ಸವ ಮತ್ತು ಯುವಜನೋತ್ಸವ -2024 ರ ಕಾರ್ಯಕ್ರಮವನ್ನು ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ವಿಜೇತರಿಗೆ ಬಹುಮಾನ
ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ನಗದು ಬಹುಮಾನ. ಪ್ರಮಾಣ ಪತ್ರ ನೀಡಲಾಗುವುದು. ಸ್ಪರ್ಧಿಗಳು ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿಬೇಕು. ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್ ಕಡ್ಡಾಯವಾಗಿ ತರಬೇಕು. ಸ್ಪರ್ಧಿಗಳು 15 ರಿಂದ 29 ವರ್ಷದ ಒಳಗಿರಬೇಕು. ಪಕ್ಕವಾದ್ಯ, ರಂಗಸಜ್ಜಿಕೆ, ವೇಷಭೂಷಣ, ವಿಜ್ಞಾನ ಮೇಳ ಇತ್ಯಾದಿ ಸ್ಪರ್ಧೆಗಳಿಗೆ ಪೂರಕ ಉಪಕರಣಗಳನ್ನು ಸ್ಪರ್ಧಿಗಳೇ ಸಿದ್ಧಪಡಿಸಿಕೊಂಡು ಸ್ಪರ್ಧಿಸಬೇಕು ಎಂದು ಮಾಹಿತಿ ನೀಡಿದರು.ಜಿಪಂ ಯೋಜನಾ ನಿರ್ದೇಶಕ ಈಶ್ವರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಎಸ್.ಮಹೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ ರೆಡ್ಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಜಿಲ್ಲಾ ಯುವ ಜನ ಅಧಿಕಾರಿ ಕೆ.ರಾಜೇಶ್ ಕಾರಂತ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
----------ಸಿಕೆಬಿ-5 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಯುವ ಜನೋತ್ಸವ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು.