ಕನ್ನಡಪ್ರಭ ವಾರ್ತೆ ಮಡಿಕೇರಿ
ಹೀಗೆ ಹಲವು ವಿಚಾರಗಳ ಕುರಿತು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ‘ಯುವ ಸಂಸತ್ ಸ್ಪರ್ಧೆ’ ಕಾರ್ಯಕ್ರಮದಲ್ಲಿ ವಿಪಕ್ಷದಿಂದ ಕೇಳಿ ಬಂದ ಪ್ರಶ್ನೆಗಳ ಸುರಿಮಳೆ.
ಇದಕ್ಕೆ ಆಡಳಿತ ಪಕ್ಷದಿಂದ ಸಮರ್ಪಕ ಉತ್ತರವೂ ದೊರೆಯಿತು. ಭಾರತ ‘ಅಲಿಪ್ತ ನೀತಿ’ ಹೊಂದಿದ್ದು, ಸದಾ ಶಾಂತಿಯನ್ನು ಬಯಸುತ್ತದೆ. ಆ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಸಂಬಂಧವನ್ನು ಬಲಪಡಿಸಲು ಸದಾ ಸನ್ನದ್ಧವಾಗಿದೆ ಎಂಬ ಉತ್ತರ ದೊರೆಯಿತು.ಇಸ್ರೇಲ್ ಮತ್ತು ಹಮಾಸ್, ರಷ್ಯಾ ಮತ್ತು ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಆ ರಾಷ್ಟ್ರದ ಮುಖ್ಯಸ್ಥರ ಜೊತೆ ಚರ್ಚಿಸಲಾಗಿದೆ. ಆ ನಿಟ್ಟಿನಲ್ಲಿ ಭಾರತ ಸದಾ ಶಾಂತಿಯನ್ನು ಬಯಸುತ್ತದೆ ಎಂದು ಆಡಳಿತ ಪಕ್ಷದಿಂದ ಉತ್ತರ ದೊರೆಯಿತು.
ಇದಕ್ಕೆ ಆಡಳಿತ ಪಕ್ಷದವರು ಸಮರ್ಪಕ ಉತ್ತರ ನೀಡಿ, ದೇಶದ ಅಭಿವೃದ್ಧಿಯಲ್ಲಿ ಎಲ್ಲರೂ ಕೈಜೋಡಿಸಬೇಕು. ಜೊತೆಗೆ ಸಮಾನವಾಗಿ ಬದುಕಬೇಕು. ಆ ನಿಟ್ಟಿನಲ್ಲಿ ಏಕರೂಪ ಕಾನೂನುಗಳು ಜಾರಿಯಾಗಬೇಕು, ಸಮಾಜ ನಿಂತ ನೀರು ಆಗದೆ, ಹರಿಯುವ ನೀರು ಆಗಬೇಕು. ಆ ದಿಸೆಯಲ್ಲಿ ಬದಲಾವಣೆಯತ್ತ ಮುನ್ನೆಡೆಯಬೇಕು ಎಂದು ಹೇಳಿದರು.
ಮಡಿಕೇರಿಯ ಸರ್ಕಾರಿ ಪಿಯು ಕಾಲೇಜಿನ ಶಕುಂತಲಾ ಅಧ್ಯಕ್ಷತೆ ವಹಿಸಿದ್ದರು. ತಿತಿಮತಿ ಸರ್ಕಾರಿ ಪಿಯು ಕಾಲೇಜಿನ ವಿನಯ ಕುಮಾರ, ವಿರಾಜಪೇಟೆ ಸರ್ಕಾರಿ ಪಿಯು ಕಾಲೇಜಿನ ಅನ್ಸಿಕಾ, ಸೋಮವಾರಪೇಟೆಯ ಪಿಯು ಕಾಲೇಜಿನ ಅಮೃತ್, ಕುಶಾಲನಗರದ ಸರ್ಕಾರಿ ಪಿಯು ಕಾಲೇಜಿನ ಪ್ರೀತಂ, ಮೂರ್ನಾಡು ಪಿಯು ಕಾಲೇಜಿನ ಅನನ್ಯ ದೇವೇಂದ್ರ ನಾಯಕ್, ನಾಪೋಕ್ಲು ಸರ್ಕಾರಿ ಪಿಯು ಕಾಲೇಜಿನ ರಾಣಿ, ಕೂಡಿಗೆ ಸರ್ಕಾರಿ ಪಿಯು ಕಾಲೇಜಿನ ಡಿಂಪಲ್, ಸೋಮವಾರಪೇಟೆ ಪಿಯು ಕಾಲೇಜಿನ ಇಮ್ರಾನ್, ಮಡಿಕೇರಿ ಸರ್ಕಾರಿ ಪಿಯು ಕಾಲೇಜಿನ ಶ್ರೀನಿವಾಸ ಇತರರು ಆಡಳಿತ ಮತ್ತು ವಿರೋಧ ಪಕ್ಷದಲ್ಲಿ ಪಾಲ್ಗೊಂಡು ಗಮನ ಸೆಳೆದರು. ಸುಮಾರು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯುವ ಸಂಸತ್‌ನಲ್ಲಿ ಪಾಲ್ಗೊಂಡಿದ್ದರು.
ಸುಗಮ ಹಾಗೂ ಸುಭದ್ರವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ತೆಗೆದುಕೊಂಡು ಹೋಗುವಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪಾತ್ರ ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಚುನಾಯಿತ ಪ್ರತಿನಿಧಿಗಳ ಜವಾಬ್ದಾರಿ ಹೆಚ್ಚಿನದ್ದಾಗಿದೆ ಎಂದು ವೀಣಾ ಅಚ್ಚಯ್ಯ ಅವರು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಕೆ.ಮಂಜುಳಾ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪ್ರತಿಭೆ ಇದ್ದು, ಅವಕಾಶ ಕಲ್ಪಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಯುವ ಸಂಸತ್‌ನ್ನು ಆಯೋಜಿಸಲು ಸರ್ಕಾರ ಅವಕಾಶ ಮಾಡಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಳ್ಳಬೇಕು. ಒಳ್ಳೆಯ ವ್ಯಕ್ತಿತ್ವವನ್ನು ರೂಢಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಸಲಹೆ ಮಾಡಿದರು.