ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನ 14 ಸಾಧಕರಿಗೆ ಗೌರವ ಸನ್ಮಾನ

KannadaprabhaNewsNetwork |  
Published : Feb 17, 2025, 12:31 AM IST
32 | Kannada Prabha

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ಫೆ. 21 ಮತ್ತು 22 ರಂದು ನಡೆಸುವ 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಹಿರಿಯ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ.

ಕನ್ನಡಪ್ರಭ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆಯ ಮಂಗಳ ಸಭಾಂಗಣದಲ್ಲಿ ಫೆ. 21 ಮತ್ತು 22 ರಂದು ನಡೆಸುವ 27 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಹಿರಿಯ ಸಾಹಿತಿಗಳಾದ ಡಾ. ಪ್ರಭಾಕರ ಶಿಶಿಲ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದ್ದು ಸಾಹಿತ್ಯ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ ನಾಡಿನ 13 ಮಂದಿಯನ್ನು ಮತ್ತು ಒಂದು ಸಂಸ್ಥೆಯನ್ನು ಗುರುತಿಸಿ ಗೌರವ ಸನ್ಮಾನ ಮಾಡಲಾಗುವುದು.ಉಡುಪಿಯ ಜಿಲ್ಲಾಧಿಕಾರಿಗಳಾದ ಡಾ. ವಿದ್ಯಾಕುಮಾರಿ ಪಾವೂರು, ಕಾದಂಬರಿಕಾರ ಡಾ. ಪ್ರಭಾಕರ ನೀರುಮಾರ್ಗ, ಮಂಗಳೂರು; ಸಾಮಾಜಿಕ ಮುಖಂಡ ವೆಂಕಪ್ಪ ಕಾಜವ ಮಿತ್ತಕೋಡಿ, ಮುಡಿಪು; ಕಲಾವಿದರಾದ ಎಂ.ಜಿ.ಕಜೆ, ಸುಳ್ಯ; ಲೇಖಕ ಪರಮಾನಂದ ಸಾಲಿಯಾನ್, ಮೂಲ್ಕಿ; ಪತ್ರಕರ್ತ ಧನಂಜಯ ಮೂಡಬಿದಿರೆ; ವರ್ಣಚಿತ್ರ ಕಲಾವಿದ ಮೋನಪ್ಪ, ಪುತ್ತೂರು; ಶಿಕ್ಷಕರು ಮತ್ತು ಕ್ರೀಡಾಪಟುಗಳಾಗಿರುವ ಪ್ರೇಮಾಗೌಡ, ಕಡಬ; ಕರಾವಳಿಯ ಪಾರಂಪರಿಕ ವಸ್ತುಸಂಗ್ರಹಕಾರರಾಗಿರುವ ಶಶಿಕುಮಾರ್ ಭಟ್ ಪಡಾರು, ವಿಟ್ಲ; ಜಲ ಸಂವರ್ಧನ ತಜ್ಞ ಡಾ. ಜೋಸೆಫ್ ಎನ್ ಎಮ್, ಬೆಳ್ತಂಗಡಿ; ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮಹಮ್ಮದ್ ಕುಂಞಿ ತೊಕ್ಕೊಟ್ಟು, ಮಂಗಳೂರು; ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಸಬಿತ ಕೊರಗ, ಕೊಣಾಜೆ ಅವರನ್ನು ಸನ್ಮಾನಿಸಲಾಗುವುದು. ಗಡಿನಾಡಿನಲ್ಲಿ ಕನ್ನಡ ವಿಸ್ತರಣೆಯ ಸೇವೆಗಾಗಿ ನಿರಂಜನರ ಕಾದಂಬರಿಗಳ ಮಲಯಾಳ ಅನುವಾದಕರಾಗಿರುವ ಪಯ್ಯನ್ನೂರು ಕುಂಞ್ಞಿರಾಮನ್ ಮಾಸ್ತರ್ ಮತ್ತು ಸಂಸ್ಥೆಗಳಿಗೆ ನೀಡುವ ಗೌರವಕ್ಕೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ ಇವರನ್ನು ಸಮ್ಮೇಳನದಲ್ಲಿ ಸನ್ಮಾನಿಸಲಾಗುವುದಾಗಿ ದ.ಕ.ಜಿಲ್ಲಾ ಕ.ಸಾ.ಪ ದ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ, ಸಂಯೋಜನ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಕುಂಬ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ