ಜಿಲ್ಲಾ ಸಾಹಿತ್ಯ ಸಮ್ಮೇಳನ: ಸ್ವರಚಿತ ಕವನ ಆಹ್ವಾನ

KannadaprabhaNewsNetwork |  
Published : Apr 30, 2026, 02:30 AM IST
ಕವನ ಆಹ್ವಾನ | Kannada Prabha

ಸಾರಾಂಶ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಮೇ 29 ಮತ್ತು 30ರಂದು ಜರುಗಲಿದೆ.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಮೇ 29 ಮತ್ತು 30ರಂದು ಜರುಗಲಿದೆ. ಈ ಸಂದರ್ಭ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗೋಷ್ಠಿಗಳು ಗೀತ ಗಾಯನ ಕವಿಗೋಷ್ಠಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕವನ ವಾಚಿಸಲು ಆಸಕ್ತರಾಗಿರುವ ಕವಿ/ ಕವಿಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಿಯಿತ್ರಿಯರು ಕನ್ನಡ ಭಾಷೆಯ ಒಂದು ಕವನವನ್ನು ಈ ಕೆಳಗೆ ಸೂಚಿಸಿದ ವಿಳಾಸಕ್ಕೆ ಮೇ 3ರೊಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಕವನವು 16 ಗೆರೆಗಳಿಗೆ ಸೀಮಿತವಾಗಿರಬೇಕು.

ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು.ವಿಶೇಷವಾಗಿ ಮಕ್ಕಳ ಕವನ (6ರಿಂದ 13 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ಈ ಕೆಳಗೆ ಸೂಚಿಸಿದ ವ್ಯಾಟ್ಸಾಪ್- ಇಮೇಲ್ ಮೂಲಕ ಕಳುಹಿಸಬಹುದು. ಕವನಗಳನ್ನು ಟೈಪ್ ಮಾಡಿ ಕಳುಹಿಸಬೇಕು. ವಾಟ್ಸಾಪ್ ಅಥವಾ ಇಮೇಲ್ ನಲ್ಲಿ ಕವನದ ಛಾಯಾ ಪ್ರತಿಯನ್ನು ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ.

ವಾಟ್ಸಾಪ್ ಅಥವಾ ಇಮೇಲ್ ಸೌಲಭ್ಯ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು.ಕವನ ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಂಬೇಡ್ಕರ್ ಭವನದ ಬಳಿ,ಸುದರ್ಶನ್ ವೃತ್ತ, ಮಡಿಕೇರಿ - 571201 ಮೊಬೈಲ್ ಸಂಖ್ಯೆ : 9113892396,8762348999. ಇಮೇಲ್ ಅಡ್ರೆಸ್ dineshbc90@gmail.com &vinodmb5575@gmail.com ಎಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪಿ.ಎಫ್. ಸಭಾಸ್ಟಿನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾಸ್‌ ಸಿಲಿಂಡರ್‌ ಕೊರತೆ: ಹೊಟೇಲ್ ಉದ್ಯಮ ಕಂಗಾಲು
ದ.ಕ. ಹಾಲು ಉತ್ಪಾದಕರ ಒಕ್ಕೂಟಕ್ಕೆ 10.61 ಕೋಟಿ ರು.ನಿವ್ವಳ ಲಾಭ