ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಕಸಾಪ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಅಧ್ಯಕ್ಷರಾಗಿ ಜಿಲ್ಲಾಧಿಕಾರ ಟಿ.ಭೂಬಾಲನ್, ಉಪಾಧ್ಯಕ್ಷರಾಗಿ ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹಾಗೂ ಕಾರ್ಯಾಧ್ಯಕ್ಷರಾಗಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ಸಮ್ಮೇಳನ ಜರುಗಲಿದೆ ಎಂದು ತಿಳಿಸಿದರು.
ಪ್ರಧಾನ ವೇದಿಕೆಗೆ ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿ, ಮುಖ್ಯ ಮಹಾದ್ವಾರಕ್ಕೆ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ, ಪುಸ್ತಕ ಮಳಿಗೆಗೆ ಜಾನಪದ ಭೀಷ್ಮ ಡಾ.ಶಿಂಪಿ ಲಿಂಗಣ್ಣ, ದಾಸೋಹ ಮನೆಗೆ ಕನ್ನಡಪ್ರೇಮಿ ಡಾ.ಜಯದೇವಿತಾಯಿ ಲಿಗಾಡೆ ಅವರ ಹೆಸರು ಇಡುವ ಮೂಲಕ ಮಹಾನ್ ಚೇತನಗಳಿಗೆ ಗೌರವ ಸಲ್ಲಿಸಲಾಗಿದೆ ಎಂದರು.ಫೆ.24ರಂದು ಬೆಳಗ್ಗೆ 8ಗಂಟೆಗೆ ರಂಗಮಂದಿರದ ಎದುರಿಗೆ ಧ್ವಜಾರೋಹಣ ಸಮಾರಂಭ ಜರುಗಲಿದೆ. ಬಳಿಕ 9 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ನಗರದ ಸಿದ್ದೇಶ್ವರ ದೇವಸ್ಥಾನದಿಂದ ಮಹಾತ್ಮಾಗಾಂಧಿ ವೃತ್ತದ ಮಾರ್ಗವಾಗಿ ಕಂದಗಲ್ಲ ಹನುಮಂತರಾಯ ರಂಗಮಂದಿರದ ವರೆಗೆ ಮೆರವಣಿಗೆ ಸಾಗಿ ಬರಲಿದೆ. ಬೆಳಗ್ಗೆ 10.30ಕ್ಕೆ ರಂಗಮಂದಿರದಲ್ಲಿ ಉದ್ಘಾಟನಾ ಸಮಾರಂಭ ಜರುಗಲಿದೆ. ಸಚಿವ ಎಂ.ಬಿ.ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವ ಶಿವಾನಂದ ಪಾಟೀಲ ನಾಡದೇವಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಸಿ.ಎಸ್.ನಾಡಗೌಡ, ಬಸನಗೌಡ ಪಾಟೀಲ ಯತ್ನಾಳ, ಸುನೀಲಗೌಡ ಪಾಟೀಲರು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ 1ನೇ ಗೋಷ್ಠಿ ಕವಿಗೋಷ್ಠಿ ನಡೆಯಲಿದ್ದು, 28 ಕವಿಗಳು ಕವನ ವಾಚಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ 2ನೇ ಗೋಷ್ಠಿ ಶರಣ ಸಾಹಿತ್ಯ ಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ 3ನೇ ಗೋಷ್ಠಿ ಬಂಡಾಯ ಸಾಹಿತ್ಯ- ನೆಲೆಗಳು ಎಂಬ ಗೋಷ್ಠಿ ನಡೆಯಲಿದೆ. ಗೋಷ್ಠಿಗಳ ಮಧ್ಯದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿವೆ. ಸಂಜೆ 7ಗಂಟೆಗೆ ಮನರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಎರಡನೇ ದಿನದ ಕಾರ್ಯಕ್ರಮಗಳು
ಫೆ.24 ಹಾಗೂ 25ರಂದು ಬೆಳಗ್ಗೆ 8 ರಿಂದ 11ರ ವರೆಗೆ ಅಲ್ಪೋಪಹಾರ ಇರಲಿದೆ. ಮಧ್ಯಾಹ್ನ 12ರಿಂದ 3ರ ವರೆಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಇರಲಿದೆ. ಹಾಗೂ ಸಂಜೆ 7 ರಿಂದ ರಾತ್ರಿ10ರ ವರೆಗೆ ಊಟದ ವ್ಯವಸ್ಥೆ ಇರಲಿದೆ.
ಬಾಕ್ಸ್
ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇಂಗಳೇಶ್ವರ ವಚನಶಿಲಾ ಮಂಟಪದ ಚನ್ನಬಸವ ಮಹಾಸ್ವಾಮಿಗಳು ಆಯ್ಕೆ ಮಾಡಲಾಗಿದೆ. ಸ್ವಾಮೀಜಿಗಳನ್ನು ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮೀತಿಯಲ್ಲಿಯೇ ಆಯ್ಕೆ ಮಾಡಲಾಗಿದ್ದು, 97ವರ್ಷದ ಚನ್ನಬಸವ ಮಹಾಸ್ವಾಮಿಗಳು ವಚನಶಿಲಾ ಮಂಟಪ ಕಟ್ಟಿದ್ದಾರೆ. ಸುಧೀರ್ಗ 40 ವರ್ಷಗಳಿಂದ ಅವರು ವಚನಗಳನ್ನು ಉಳಿಸಿ, ಬೆಳೆಸುವ ಸೇವೆಯನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಂತವರನ್ನು ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಸಮ್ಮೇಳನಕ್ಕೆ ಘನತೆ ಬಂದಿದೆ ಎಂದು ತಿಳಿಸಿದರು.