ಕನ್ನಡಪ್ರಭ ವಾರ್ತೆ ಬೀಳಗಿ
ರಾಜ್ಯಕ್ಕೆ ಟಾಪರ್ ಆಗಿರುವ ಮುಧೋಳ ತಾಲೂಕಿನ ವಜ್ಜರಮಟ್ಟಿ ಗ್ರಾಮದ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಗೌರವ ಸನ್ಮಾನ ನೆರವೇರಿಸಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ೬೨೫ಕ್ಕೆ ೬೨೫ ಅಂಕ ಪಡೆದು ರಾಜ್ಯಕ್ಕೆ ಮೊದಲನೇ ಸ್ಥಾನ ಪಡೆದ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣೂರ ಸಾಧನೆ ಎಲ್ಲರಿಗೂ ಸ್ಫೂರ್ತಿಯಾಗಿದೆ. ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಸಾಧನೆ ಮಾಡಿರುವುದು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ತಂದೆ-ತಾಯಿ ಹಾಗೂ ಬೋಧನೆ ಮಾಡಿದ ಶಿಕ್ಷಕರಿಗೆ ಗೌರವ ತಂದು ಕೊಟ್ಟಿದ್ದಾರೆ. ಇವರ ಸಾಧನೆ ಅನೇಕ ವಿದ್ಯಾರ್ಥಿಗಳಿಗೆ ಪ್ರರಣೆಯಾಗಲಿ ಎಂದು ಶುಭ ಹಾರೈಸಿದರು.