ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಶಾಸಕರಿಂದ ನಿರ್ಧಾರ

KannadaprabhaNewsNetwork |  
Published : Oct 30, 2025, 01:30 AM IST
29ಕೆಎಂಎನ್ ಡಿ22 | Kannada Prabha

ಸಾರಾಂಶ

ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಮುನ್ನವೇ 8 ಸ್ಥಾನಗಳಲ್ಲಿ ಕಾಂಗ್ರೆಸ್ ಅವಿರೋಧವಾಗಿ ಆಯ್ಕೆಯಾಗಿದೆ. ಉಳಿದ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಹೀಗಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಜಿಲ್ಲೆಯ ಶಾಸಕರು ತೀರ್ಮಾನ ಮಾಡುತ್ತಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಮಂಡ್ಯ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಬಳಿಕ ಅಧ್ಯಕ್ಷರು ಯಾರು ಆಗಬೇಕು ಎಂಬ ಬಗ್ಗೆ ಜಿಲ್ಲೆಯ ಶಾಸಕರು ಚರ್ಚೆ ನಡೆಸಿ ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಶಾಸಕ ಕೆ.ಎಂ.ಉದಯ್ ಹೇಳಿದರು.

ಪಟ್ಟಣದ ಶಿವಪುರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಜಿಲ್ಲೆಯ ಕೈಗಾರಿಕಾ ಸಹಕಾರ ಸಂಘಗಳ ಕ್ಷೇತ್ರದಿಂದ ಆಯ್ಕೆಯಾಗಿರುವ ಕೆ.ಸಿ.ಜೋಗಿಗೌಡ, ಹಾಲು ಉತ್ಪಾದಕರ ಸಹಕಾರ ಕ್ಷೇತ್ರದಿಂದ ಸಿ.ಚೆಲುವರಾಜು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಆಯ್ಕೆಯಾಗಿರುವ ಪಿ.ಸಂದರ್ಶ ಅವರಿಗೆ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ ಮುನ್ನವೇ 8 ಸ್ಥಾನಗಳಲ್ಲಿ ಕಾಂಗ್ರೆಸ್ ಅವಿರೋಧವಾಗಿ ಆಯ್ಕೆಯಾಗಿದೆ. ಉಳಿದ ಮೂರು ಸ್ಥಾನಗಳಿಗೆ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಹೀಗಾಗಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಯಾರಾಗಬೇಕು ಎಂಬ ಬಗ್ಗೆ ಜಿಲ್ಲೆಯ ಶಾಸಕರು ತೀರ್ಮಾನ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಈಗಾಗಲೇ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿರುವುದರಿಂದ ಅವರಿಗೆ ಬ್ಯಾಂಕ್‌ನ ಅಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ. ಸಹಕಾರ ಕ್ಷೇತ್ರದಿಂದ ಪ್ರಥಮವಾಗಿ 8 ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ದಿಕ್ಸೂಚಿಯಾಗಿದೆ. ಇದರಿಂದ ಪಕ್ಷದ ಕಾರ್ಯಕರ್ತರಲ್ಲಿ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ ಎಂದರು.

ಸಹಕಾರ ಕ್ಷೇತ್ರದಿಂದ ಆಯ್ಕೆಯಾಗಿರುವ ಪಕ್ಷದ ನಿರ್ದೇಶಕರು ರೈತರು ಮತ್ತು ಹೈನುಗಾರರಿಗೆ ನೆರವಾಗುವ ಯೋಜನೆ ಜಾರಿಗೆ ತಂದು ಹೆಚ್ಚಿನ ಅನುಕೂಲ ಕಲ್ಪಿಸಬೇಕು ಎಂದರು.

ಈ ವೇಳೆ ಮನ್ಮುಲ್ ಅಧ್ಯಕ್ಷ ಯು.ಸಿ.ಶಿವಕುಮಾರ್, ನಿರ್ದೇಶಕ ಹರೀಶ್ ಕುಮಾರ್, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ನಗರಸಭೆ ಮಾಜಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನ ಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು.

PREV

Recommended Stories

ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ಹಣೆಯಲ್ಲಿ ಬರೆದಿದ್ದರೆ ಡಿಕೆಶಿ ಸಿಎಂ ಆಗ್ತಾರೆ ಇಲ್ದಿದ್ರೆ ಇಲ್ಲ : ಡಿಕೆಸು