31ರಂದು ಜಿಲ್ಲಾ ಮುಸ್ಲಿಮ್ ಒಕ್ಕೂಟದ ಸ್ನೇಹ ಸಮಾವೇಶ

KannadaprabhaNewsNetwork |  
Published : Oct 08, 2026, 02:30 AM IST
07ರತ್ನ | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡಲಾಗುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿಧ ಸಮುದಾಯಗಳ ಸ್ನೇಹ ಸಮಾವೇಶವನ್ನು ಅ. 31ರಂದು ಸಂಜೆ 6.30 ಕ್ಕೆ ನಗರದ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

ಉಡುಪಿ : ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಪ್ರತಿ ಎರಡು ವರ್ಷಗಳಿಗೊಮ್ಮೆ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ನೀಡಲಾಗುವ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ವಿವಿಧ ಸಮುದಾಯಗಳ ಸ್ನೇಹ ಸಮಾವೇಶವನ್ನು ಅ. 31ರಂದು ಸಂಜೆ 6.30 ಕ್ಕೆ ನಗರದ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

ಒಕ್ಕೂಟದ ಜಿಲ್ಲಾಧ್ಯಕ್ಷ ಮುಹಮ್ಮದ್ ಮೌಲಾ ಹಾಗೂ ನಿಕಟಪೂರ್ವ ಅಧ್ಯಕ್ಷ ಯಾಸೀನ್ ಮಲ್ಪೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.ಈ ಬಾರಿನ ಮಾನವ ರತ್ನ ಪ್ರಶಸ್ತಿಗೆ ಬಹುಭಾಷಾ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್‌ರಾಜ್, ಸೇವಾ ರತ್ನ ಪ್ರಶಸ್ತಿಗೆ ಅನಿವಾಸಿ ಭಾರತೀಯ ಉದ್ಯಮಿ ಹಾಗೂ ಕೊಡುಗೈದಾನಿ ಹಿದಾಯತುಲ್ಲಾ ಅಬ್ಬಾಸ್ ಮತ್ತು ಸೌಹಾರ್ದ ರತ್ನ ಪ್ರಶಸ್ತಿಗೆ ಹಿರಿಯ ಹೋರಾಟಗಾರ, ಲೇಖಕ ಹಾಗೂ ಚಿಂತಕ ಸುರೇಶ್ ಭಟ್ ಬಾಕ್ರಬೈಲು ಅವರನ್ನು ಆಯ್ಕೆ ಮಾಡಲಾಗಿದೆ ಎಂದರು.ವಿವಿಧ ಕ್ಷೇತ್ರಗಳ ಸಾಧಕರುಗಳಾದ ಹಂಗಾರಕಟ್ಟೆ ಇಬ್ರಾಹಿಂ ಸಾಹೇಬ್, ಚಂದ್ರಶೇಖರ ಶೆಟ್ಟಿ ಕುಂದಾಪುರ, ಬಿಪಿನ್ ಚಂದ್ರಪಾಲ್ ಕಾರ್ಕಳ, ಗೀತಾ ಸುರೇಶ್ ಕುಮಾರ್, ಜೆರಾಲ್ಡ್ ಪಿಂಟೋ, ಫಾತಿಮಾ ರಲಿಯಾ ಅವರನ್ನು ಸನ್ಮಾನಿಸಲಾಗುವುದು.

ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಶಭೀ ಅಹ್ಮದ್ ಖಾಝಿ, ನಸೀರ್ ಅಹ್ಮದ್ ಕಾರ್ಕಳ, ಸಯ್ಯದ್ ಫರೀದ್, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಕಾರ್ಯದರ್ಶಿ ಜಫ್ರುಲ್ಲಾ ತೋನ್ಸೆ, ಖಜಾಂಚಿ ಇಕ್ಬಾಲ್ ಎಸ್.ಕೆ., ಸಂಘಟನಾ ಕಾರ್ಯದರ್ಶಿ ಜಮೀರ್ ಮೌಲಾನಾ, ಜಿಲ್ಲಾ ಸದಸ್ಯ ಪೀರು ಸಾಹೇಬ್, ಮಾಜಿ ಅಧ್ಯಕ್ಷ ಅಶ್ಪಕ್ ಅಹ್ಮದ್ ಹಾಗೂ ಟಿ.ಎಸ್.ಅನ್ಸಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್ ಲೋಪ: ರಾಷ್ಟ್ರಪತಿಗೆ ಇಂಡಿಯಾ ಒಕ್ಕೂಟ ಮನವಿ
ಸಂಸ್ಕೃತಿ ಜತೆಗೆ ಗ್ರಾಮೀಣ ಕ್ರೀಡೆ ಉಳಿಸಿ ಬೆಳೆಸಿ: ಪರಮೇಶ್ವರ್