ಕನ್ನಡಪ್ರಭ ವಾರ್ತೆ ಮೈಸೂರು
ಮೈಸೂರು ತಾಲೂಕಿನ ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಹೈದರಾಬಾದ್ ನ ಮ್ಯಾನೇಜ್, ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ವಿಶ್ವವಿದ್ಯಾನಿಲಯವು ನೈಸರ್ಗಿಕ ಕೃಷಿ ಕುರಿತು ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿಸಖಿ) 5 ದಿನಗಳ ತರಬೇತಿ ಕಾರ್ಯಕ್ರಮವನ್ನು ಅವರು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.
ಕೃಷಿಸಖಿಯರಿಗಾಗಿ ನೈಸರ್ಗಿಕ ಕೃಷಿ ಬಗ್ಗೆ ಈ 5 ದಿನಗಳು ಆಯೋಜಿಸಿರುವ ತರಬೇತಿ ಬಹಳ ಉಪಯುಕ್ತವಾಗಿದೆ. ಈ ತರಬೇತಿಯನ್ನು ಪಡೆದು, ಕೃಷಿಸಖಿಯರು ಪ್ರಮುಖ ಇಲಾಖೆಗಳು ಹಾಗೂ ರೈತರಿಗೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಸಿ, ಉದ್ಯೋಗಾವಕಾಶಗಳನ್ನು ಕಲ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿ ಶ್ರಮಿಸಬೇಕು ಎಂದು ಅವರು ಮನವಿ ಮಾಡಿದರು.ಕೃಷಿಸಖಿ ತರಬೇತಿಯನ್ನು ಹೆಣ್ಣು ಮಕ್ಕಳಿಗೆ ಆಯೋಜಿಸಿರುವುದು ನಿಮ್ಮಲ್ಲಿ ಆತ್ಮ ವಿಶ್ವಾಸ ತುಂಬಿ ಸ್ವಾವಲಂಭಿ ಜೀವನ ನಡೆಸಲು ಸಹಕಾರಿಯಾಗಬೇಕು. ತಾವೆಲ್ಲರೂ ಯಾವುದೇ ಹಿಂಜರಿಕೆಯಿಲ್ಲದೆ ಈ ಕಾರ್ಯಕ್ರಮದಲ್ಲಿ ಪಡೆದ ನೂತನ ತಾಂತ್ರಿಕೆಗಳನ್ನು ತಮ್ಮ ತಮ್ಮ ಗ್ರಾಮಗಳಲ್ಲಿ ನಡೆಯುವ ಗ್ರಾಮಸಭೆಗಳಲ್ಲಿ ಭಾಗವಹಿಸಿ, ರೈತರಿಗೆ ಮಾಹಿತಿ ನೀಡುವಂತೆ ಅವರು ತಿಳಿಸಿದರು.
ಸಹಾಯಕ ಪ್ರಾಧ್ಯಾಪಕರಾದ ಡಾ.ಆರ್.ಎನ್. ಪುಷ್ಪಾ, ರಾಹುಲ್ ದಾಸ್, ಕ್ಷೇತ್ರ ಸಹಾಯಕ ಎ. ಆಸಿಫ್ ಪಾಷಾ ಮೊದಲಾದವರು ಇದ್ದರು.