ಕನ್ನಡಪ್ರಭ ವಾರ್ತೆ ಮಡಿಕೇರಿ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಮಾತನಾಡಿ, ಈ ವಾರ್ಷಿಕ ಕ್ರೀಡಾಕೂಟಕ್ಕಾಗಿ ಹಗಲಿರುಳು ಶ್ರಮಿಸಿದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಕೃತಜ್ಞತೆ ಅರ್ಪಿಸಿದರು.
ಮೂರು ದಿನಗಳ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಎಲ್ಲಾ ಠಾಣೆಯ ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದರು.ಪ್ರತಿದಿನ ಕರ್ತವ್ಯದ ಜಂಜಾಟದಲ್ಲಿ ಇರುವವರಿಗೆ ಒಂದಿಷ್ಟು ಅವಧಿ ಮಾನಸಿಕವಾಗಿ ಈ ಕ್ರೀಡಾಕೂಟಗಳ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ಳಲು ಅವಕಾಶ ಈ ಕ್ರೀಡಾಕೂಟಗಳ ಮೂಲಕ ಸಾಧ್ಯವಾಗುತ್ತದೆ ಎಂದರು.
ಉದ್ಘಾಟನಾ ಕಾರ್ಯಕ್ರಮದ ನಂತರ ವಿವಿಧ ಸ್ಪರ್ಧೆಗಳಲ್ಲಿ ಜಿಲ್ಲೆಯ ಹಲವು ಪೊಲೀಸರು, ಪೊಲೀಸ್ ಅಧಿಕಾರಿಗಳು, ಭಾಗವಹಿಸಿದರು.ನಾಳೆ ಸಮಾರೋಪ:
ಗುರುವಾರ ಸಂಜೆ 4 ಗಂಟೆಗೆ ಕ್ರೀಡಾಕೂಟ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ.ಎಂ.ಬಿ ಬೋರಲಿಂಗಯ್ಯ ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧಿಕ್ಷಕ ಕೆ. ಸುಂದರ್ ರಾಜ್ ಭಾಗವಹಿಸಲಿದ್ದಾರೆ.