ಕನ್ನಡಪ್ರಭ ವಾರ್ತೆ ಉಡುಪಿ
ಎ.12ರ ಸಂಘದ ಸ್ಥಾಪನಾ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಿಗೆ ಸ್ಥಾಪನಾ ದಿನದ ಗೌರವ ಸಲ್ಲಿಸಲಾಗುತ್ತಿದೆ. ಪ್ರತಿವರ್ಷ ಕ್ರೀಡಾಕೂಟ, ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ವಾರ್ಷಿಕ ಪ್ರವಾಸವನ್ನು ಏರ್ಪಡಿಸಿಕೊಂಡು ಬರಲಾಗುತ್ತಿದೆ ರಜತ ಮಹೋತ್ಸವದ ಹಿನ್ನೆಲೆಯಲ್ಲಿ ವರ್ಷ ಇಡೀ 25 ಕಾರ್ಯಕ್ರಮಗಳನ್ನು ಸಂಘ ಯಶಸ್ವಿಯಾಗಿ ನಡೆಸಿದೆ. ಮುಖ್ಯವಾಗಿ ಸಂಘದ ಸದಸ್ಯರುಗಳಿಗಾಗಿ ಕ್ಷೇಮಾಭಿವೃದ್ಧಿ ನಿಧಿಯನ್ನು ಸ್ಥಾಪಿಸಿ ಆ ಮೂಲಕ ಸದಸ್ಯರುಗಳಿಗೆ ಆರೋಗ್ಯ ನೆರವು ನೀಡುವ ಯೋಜನೆ ಹಾಕಿಕೊಂಡಿದೆ. ಸಂಘದ ವತಿಯಿಂದ ಮಾಧ್ಯಮ ಸಂವಾದ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದ್ದು, ಇದರಲ್ಲಿ ಸಚಿವರು, ವಿವಿಧ ಇಲಾಖೆಯ ಅಧಿಕಾರಿಗಳು, ಕಾನೂನು ತಜ್ಞರು, ವೈದ್ಯರು ಹಾಗೂ ಗಣ್ಯರು ಭಾಗವಹಿಸುತ್ತಿದ್ದಾರೆ. ಈ ಮೂಲಕ ವಿವಿಧ ಮಾಹಿತಿ, ವಿವಿಧ ಸಮಸ್ಯೆಗಳ ಬಗ್ಗೆ ಗಮನ ಸೆಳೆಯುವ ಕಾರ್ಯ ಮಾಡಲಾಗುತ್ತಿದೆ. ಅನಾರೋಗ್ಯ ಪೀಡಿತ ಸಂಘದ ಸದಸ್ಯರ ಚಿಕಿತ್ಸೆಗೆ ರಾಜ್ಯ ಸರ್ಕಾರದಿಂದ ಸಹಾಯಧನವನ್ನು ಕೂಡಿಸಿದೆ. ಅಂಚೆ ಇಲಾಖೆಯ ಸಹಯೋಗದೊಂದಿಗೆ ಪತ್ರಕರ್ತರಿಗೆ ಅಪಘಾತ ವಿಮೆಯನ್ನು ನೋಂದಣಿ ಮಾಡಿಸಲಾಗಿದೆ.
ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿ ಅವರೊಂದಿಗೆ ಸಂವಾದ, ಪತ್ರಕರ್ತರಿಗೆ ಪೊಕ್ಸೋಕಾಯ್ದೆ ಕುರಿತು ಕಾರ್ಯಾಗಾರ, ಅಪರಾಧ ಕೃತ್ಯಗಳಲ್ಲಿ ಫಾರೆನ್ಸಿಕ್ ಪರೀಕ್ಷೆಗಳ ಪಾತ್ರ ಕುರಿತ ವಿಚಾರ ಸಂಕಿರಣ, ಭೂಕುಸಿತ ನೆರೆಹಾವಳಿ ಹಾಗೂ ಬೆಂಕಿ ಅವಘಡಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಚರ್ಚಾ ಕಾರ್ಯಕ್ರಮವನ್ನು ಕೂಡ ಸಂಘ ನಡೆಸಿದೆಸಂಘದ ಹಲವು ಮಹಾತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಪತ್ರಿಕಾ ಭವನದಲ್ಲಿ ಗ್ರಂಥಾಲಯ ಸ್ಥಾಪಿಸಿ ಪತ್ರಿಕೋದ್ಯಮ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪತ್ರಕರ್ತರಿಗೆ ಅದರ ಪ್ರಯೋಜನ ಒದಗಿಸಲಾಗುತ್ತಿದೆ.ಹೀಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸಮಾಜ ಮುಖಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಇಂತಹ ಸಂದರ್ಭದಲ್ಲಿ ಸಂಘಕ್ಕೆ ರಾಜ್ಯೋತ್ಸವ ಪ್ರಶಸ್ತಿ ಲಭಿಸುತ್ತಿರುವುದು ಸಂಘದ ಸದಸ್ಯರಲ್ಲಿ ಇನ್ನಷ್ಟುಉತ್ಸಾಹ ತುಂಬಿದೆ ಎಂದು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಹಾಗೂ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.