ಕನ್ನಡಪ್ರಭ ವಾರ್ತೆ ಕುಶಾಲನಗರ
ಸಮ್ಮೇಳನದ ಯಶಸ್ವಿಗೆ ವಿವಿಧ ಸಮಿತಿಗಳನ್ನು ಮಾಡಿಕೊಂಡು ಸಮಯ ಪಾಲನೆಯೊಂದಿಗೆ ಶರಣ ಸಾಹಿತ್ಯ ಸಮ್ಮೇಳನ ರೂಪುಗೊಳ್ಳಬೇಕು ಎಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಇದೇ ಮೊದಲ ಬಾರಿಗೆ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಆಯೋಜನೆಯಾಗುತ್ತಿದ್ದುಎಲ್ಲರೂ ಸೇರಿ ಸಮ್ಮೇಳನ ಯಶಸ್ವಿಗೊಳಿಸಬೇಕು.ಸಮಯಪಾಲನೆಗೆ ಒತ್ತು ಕೊಡಬೇಕು. ಕೊಡಗು ಜಿಲ್ಲೆಗೆ ಆಗಮಿಸುವ ಸುತ್ತೂರು ಶ್ರೀಗಳನ್ನು ಅಷ್ಟೇ ಭಕ್ತಿ ಹಾಗೂ ಗೌರವಗಳಿಂದ ಆದರಿಸಿ ಬೀಳ್ಕೊಡಬೇಕಿದೆ ಎಂದರು.
ತೊರೆನೂರು ವಿರಕ್ತ ಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ, ಶರಣ ಸಾಹಿತ್ಯ ಸಮ್ಮೇಳನಕ್ಕೆ ಎಲ್ಲಾ ಜಾತಿ ವರ್ಗಗಳ ಜನರು ಸೇರುವ ಮೂಲಕ ಶರಣ ವಿಚಾರಗಳನ್ನು ಅರಿಯಲು ಉತ್ತಮ ವೇದಿಕೆ ಎಂದರು.ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ, ಕುಶಾಲನಗರ ತಾಲೂಕು ಅಧ್ಯಕ್ಷ ಎಂ.ಎಸ್. ಶಿವಾನಂದ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಎ.ಎಸ್.ಮಹೇಶ್, ಜಿಲ್ಲಾ ಕದಳಿ ವೇದಿಕೆ ಅಧ್ಯಕ್ಷೆ ಸರೋಜಾ ಆರಾಧ್ಯ, ಕುಶಾಲನಗರ ತಾಲೂಕು ಅಧ್ಯಕ್ಷೆ ಹೇಮಲತಾ, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಹಕ್ಕೆ ಮೋಹನ್, ಉಪಾಧ್ಯಕ್ಷ ಕೆ.ಜಿ.ರಾಜಶೇಖರ, ಕೊಡ್ಲಿಪೇಟೆ ಗಂಗಾ ವೀರಶೈವ ಮಹಿಳಾ ಸಮಾಜದ ಅಧ್ಯಕ್ಷೆ ಮಂಜುಳಾ ಸುರೇಶ, ಮತ್ತಿತರರು ಇದ್ದರು.