ಜಿಲ್ಲೆಯ ಪ್ರಥಮ ಟರ್ಫ ಕ್ರಿಕೆಟ್ ಗ್ರೌಂಡ್ ಲೋಕಾರ್ಪಣೆ

KannadaprabhaNewsNetwork |  
Published : Jul 23, 2026, 03:00 AM IST
(ಫೋಟೊಬಿಕೆಟಿ1, ಬಿ.ವಿ.ವಿ. ಸಂಘದ ದಿ ಸಿಟಿ ಕ್ರಿಕೆಟ್ ಕ್ಲಬ್ ಬಾಗಲಕೋಟೆ ಹಾಗೂ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಯೋಗದಲ್ಲಿ ಜಿಲ್ಲೆಯ ಪ್ರಥಮ ಟರ್ಫ  ಕ್ರಿಕೆಟ್ ಗ್ರೌಂಡ್ನ್ನು ಲೋಕಾರ್ಪಣೆ ಮಾಡಲಾಯಿತು.) | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆಬಿವಿವಿ ಸಂಘದ ದಿ.ಸಿಟಿ ಕ್ರಿಕೆಟ್ ಕ್ಲಬ್ ಬಾಗಲಕೋಟೆ ಹಾಗೂ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಯೋಗದಲ್ಲಿ ಜಿಲ್ಲೆಯ ಪ್ರಥಮ ಟರ್ಫ ಕ್ರಿಕೆಟ್ ಗ್ರೌಂಡನ್ನು ಲೋಕಾರ್ಪಣೆಗೊಳಿಸಲಾಯಿತು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಬಿವಿವಿ ಸಂಘದ ದಿ.ಸಿಟಿ ಕ್ರಿಕೆಟ್ ಕ್ಲಬ್ ಬಾಗಲಕೋಟೆ ಹಾಗೂ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸಹಯೋಗದಲ್ಲಿ ಜಿಲ್ಲೆಯ ಪ್ರಥಮ ಟರ್ಫ ಕ್ರಿಕೆಟ್ ಗ್ರೌಂಡನ್ನು ಲೋಕಾರ್ಪಣೆಗೊಳಿಸಲಾಯಿತು.

ಬಿವಿವಿ ಸಂಘದ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ ಟರ್ಫ ಕ್ರಿಕೆಟ್ ಗ್ರೌಂಡನ್ನು ಮಾಜಿ ಶಾಸಕರು ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಟರ್ಫ ಕ್ರಿಕೆಟ್ ಗ್ರೌಂಡ್ ನಿರ್ಮಾಣಗೊಂಡಿರುವುದು ಸಂತಸದ ವಿಷಯವಾಗಿದೆ. ಇದರಿಂದ ಶಾಲೆ-ಕಾಲೇಜು ವಿದ್ಯಾರ್ಥಿಗಳು ಹಾಗೂ ಕ್ರಿಕೆಟ್ ಅಭಿಮಾನಿಗಳಿಗೆ ಅತ್ಯುತ್ತಮ ಗುಣಮಟ್ಟದ ಮೈದಾನದಲ್ಲಿ ಅಭ್ಯಾಸ ನಡೆಸಲು ಮತ್ತು ಪಂದ್ಯಾವಳಿಗಳನ್ನು ಆಯೋಜಿಸಲು ಅನುಕೂಲವಾಗಲಿದ್ದು, ಈ ಭಾಗದ ಕ್ರಿಕೆಟ್ ಆಟಗಾರರು ಮತ್ತು ಅಭಿಮಾನಿಗಳ ಬಹುದಿನಗಳ ಕನಸು ಇದೀಗ ನನಸಾಗಿದೆ. ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಬೆಳೆಸಲು ಹಾಗೂ ಯುವಜನರಲ್ಲಿ ಕ್ರೀಡಾಸಕ್ತಿ ಉತ್ತೇಜಿಸಲು ಈ ಟರ್ಫ ಕ್ರಿಕೆಟ್ ಗ್ರೌಂಡ್ ಮಹತ್ವದ ಪಾತ್ರ ವಹಿಸಲಿದೆ ಎಂದರು.

ಶಾಲಾ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ, ಕಟ್ಟಡ ವಿಭಾಗದ ಕಾರ್ಯಾಧ್ಯಕ್ಷ ಮಹೇಶ ಕಕ್ಕರೆಡ್ಡಿ, ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಕಾಡೆಮಿ ಹಾಗೂ ಬಿವಿವಿಎಸ್ ಕ್ರಿಕೆಟ್ ಕ್ಲಬ್ ಕೋಚ್ ರಾಕೇಶ ಮಠ, ಕ್ರೀಡಾ ಶಿಕ್ಷಕರಾದ ಗಣೇಶ ಕೊರಿ, ವಿಜಯ ಹಿರೇಮಠ, ದೀಪಕ ಬದಾಮಿ, ಬಸವರಾಜ ಸಜ್ಜನ ಸೇರಿದಂತೆ ಬಿವಿವಿ ಸಂಘದ ಪದಾಧಿಕಾರಿಗಳು, ಗಣ್ಯರು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ಕ್ರಿಕೆಟ್ ಅಭಿಮಾನಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೌಡಿಶೀಟರ್ ಪ್ರಕರಣ ದಾಖಲು : ಮುಖಂಡರ ವಿರೋಧ
ಕೆಎಲ್‌ಎಸ್‌ ಜಿಐಟಿ ಚೆಸ್ ಟೂರ್ನಮೆಂಟ್-2026 ಯಶಸ್ವಿ