ಇಂದಿನಿಂದ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ

KannadaprabhaNewsNetwork |  
Published : Apr 27, 2026, 02:45 AM IST
ನಗರ ಸಮೀಪದ ಮೈಸೂರು ರಸ್ತೆಯಲ್ಲಿರುವ ಕಸ್ತೂರಬಾ ಗಾಂಧಿ ಗೋಶಾಲೆಗೆ ಉಡುಪಿಯ ಪೇಜಾವರ ಮಠದ ಜಗದ್ಗುರು ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿ ಗೋವುಗಳಿಗೆ ಮೇವು ನೀಡಿ ಆಶೀರ್ವಾದಿಸಿದರು. | Kannada Prabha

ಸಾರಾಂಶ

ವಿಜಯಪುರ: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ.ಎಲ್. ಸದಸ್ಯರಾದ ಎಂ.ಹುಬ್ಬಯ್ಯ, ಸುನೀಲ ಉಕ್ಕಲಿ, ಎನ್.ದಿವಾಕರ ಮತ್ತು ಗೀತಾ ಥಾಂವಶಿ ಹಾಗೂ ಕಾರ್ಯದರ್ಶಿ ಡಾ.ಎಚ್.ಎಸ್. ಶಿವರಾಮು ಏ.28ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ವಿಜಯಪುರ: ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ಡಾ.ಮೂರ್ತಿ.ಎಲ್. ಸದಸ್ಯರಾದ ಎಂ.ಹುಬ್ಬಯ್ಯ, ಸುನೀಲ ಉಕ್ಕಲಿ, ಎನ್.ದಿವಾಕರ ಮತ್ತು ಗೀತಾ ಥಾಂವಶಿ ಹಾಗೂ ಕಾರ್ಯದರ್ಶಿ ಡಾ.ಎಚ್.ಎಸ್. ಶಿವರಾಮು ಏ.28ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಏ.27ರಂದು ಸಂಜೆ ಬೆಳಗಾವಿಯಿಂದ ವಿಜಯಪುರಕ್ಕೆ ಆಗಮಿಸುವರು. ಏ.28 ರಂದು ಬೆಳಗ್ಗೆ 10.20 ರಿಂದ ಮಧ್ಯಾಹ್ನ 2ರ ವರೆಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜರುಗುವ ಸಭೆಯಲ್ಲಿ ಸರ್ಕಾರದ ಎಲ್ಲ ಇಲಾಖೆಗಳಿಗೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಾಂಗಕ್ಕೆ ಅನುದಾನ ವಿತರಣೆಯಾಗಿರುವ ಮತ್ತು ಜನರ ಕುಂದುಕೊರತೆಗಳ ಬಗ್ಗೆ ಪರಿಶೀಲಿಸಲಿದ್ದಾರೆ.

ಮಧ್ಯಾಹ್ನ 3 ಗಂಟೆಯಿಂದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಏ.29 ರಂದು ವಿಜಯಪುರದಿಂದ ಕಲಬುರಗಿಗೆ ಪ್ರಯಾಣ ಬೆಳೆಸುವರು. ಈ ಸಭೆಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿವಿಧ ಸಂಘಟನೆ ಮುಖಂಡರುಗಳು ಮತ್ತು ಸಂಘ ಸಂಸ್ಥೆ ಪದಾಧಿಕಾರಿಗಳು ಹಾಜರಾಗಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರಿಕೆಟ್ ಪಂದ್ಯಾವಳಿ: ಗೆದ್ದು ಬೀಗಿದ ಆಯುರ್ವೇದ ಕಾಲೇಜು ತಂಡ
ಪರಿಶ್ರಮದಿಂದ ಪ್ರತಿಫಲ ಸಾಧ್ಯ: ಇಒ ಬಡಿಗೇರ