- ಜಿಲ್ಲೆಯ 84 ಪ್ರಕರಣಗಳ ವಿಚಾರಣೆ, ಸೆ. 24 ರಂದು ಅಹವಾಲು ಸಲ್ಲಿಸಬಹುದು
ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಹಾಗೂ ಅವರ ತಂಡ ಸೆ. 24 ರಿಂದ 26 ರವರೆಗೆ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಜಿಲ್ಲೆಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.24 ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಉಪ ಲೋಕಾಯುಕ್ತರು ಹಾಗೂ ಅವರ ತಂಡ ಸಾರ್ವಜನಿಕರ ಅಹವಾಲು ಆಲಿಸಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಕಾನೂನು ಪ್ರಕಾರ ಆಗಬೇಕಾದ ಕೆಲಸದಲ್ಲಿ ವಿಳಂಬ ಮಾಡುತ್ತಿದ್ದರೆ ಅಥವಾ ವೃಥಾ ತೊಂದರೆ ಕೊಡುತ್ತಿದ್ದಲ್ಲಿ ಇದನ್ನು ಸಾರ್ವಜನಿಕರು ನಮೂನೆ 1 ಅಥವಾ 2ರಲ್ಲಿ ಸಾಕ್ಷಾಧಾರಗಳೊಂದಿಗೆ ಅಹವಾಲು ಸಲ್ಲಿಸಬಹುದಾಗಿದೆ ಎಂದರು.ಸೆ. 25 ರಂದು ಜಿಪಂ ಸಭಾಂಗಣದಲ್ಲಿ ಉಪ ಲೋಕಾಯುಕ್ತರು ಹಾಗೂ ಅವರ ನಾಲ್ಕು ಜನ ನ್ಯಾಯಾಧೀಶರನ್ನೊಳಗೊಂಡ ತಂಡ ನ್ಯಾಯಾಲಯದ ಕಲಾಪದ ರೀತಿಯಲ್ಲೇ ಕಲಾಪ ನಡೆಸಲಿದ್ದಾರೆ. ಇಲ್ಲಿ 84 ಪ್ರಕರಣಗಳ ವಿಚಾರಣೆ ನಡೆಸಲಿದ್ದಾರೆ. ಜೊತೆಗೆ ಅಂದು ಬೆಳಗ್ಗೆ ವಕೀಲರ ಸಂಘದಲ್ಲಿ ವಕೀಲರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಎಡಿಸಿ ನಾರಾಯಣ ರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಸುದರ್ಶನ್ ಇದ್ದರು.
ಸಮೀಕ್ಷೆಗಾಗಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಸಮೀಕ್ಷೆ ವೇಳೆ ಜಾತಿ ಕಾಲಂ ಒಂದು ಭಾಗ ವಾಗಿರುತ್ತದೆಯಷ್ಟೇ ಎಂದು ಹೇಳಿದರು.
ಈ ಸಮೀಕ್ಷೆಗೆ ಸಂಬಂಧಿಸಿದಂತೆ ಮೆಸ್ಕಾಂನವರು ಪ್ರತಿ ಮನೆಗೆ ತೆರಳಿ ಜಿಲ್ಲೆಯ 3.44 ಲಕ್ಷ ಮನೆಗಳಿಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸುವ ಮೂಲಕ ಜಿಯೋ ಮ್ಯಾಪಿಂಗ್ ಮಾಡಿದ್ದಾರೆ. ಯಾವ ಮನೆಗೆ ಮೆಸ್ಕಾಂನ ಆರ್.ಆರ್. ನಂಬರ್ ಇಲ್ಲವೋ ಅವರ ಮನೆಗಳಿಗೆ ಆರ್.ಆರ್. ನಂಬರ್ ಇಲ್ಲ ಎಂದು ನಮೂದಿಸಿದ್ದಾರೆ. ಇದಲ್ಲದೆ ಯಾವುದೇ ಕುಟುಂಬಗಳು ಸಮೀಕ್ಷೆಯಿಂದ ಹೊರಗುಳಿಯಬಾರದು ಎಂಬ ಉದ್ದೇಶದಿಂದ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಮನೆಮನೆಗೆ ಅರ್ಜಿ ವಿತರಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
- 18 ಕೆಸಿಕೆಎಂ 2ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿ ಮೀನಾ ನಾಗರಾಜ್ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಹಾಗೂ ಉಪ ವಿಭಾಗಾಧಿಕಾರಿ ಸುದರ್ಶನ್ ಉಪಸ್ಥಿತರಿದ್ದರು.