ಕನ್ನಡಪ್ರಭ ವಾರ್ತೆ ಮಂಗಳೂರ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೃಷ್ಣ ಜನ್ಮಾಷ್ಟಮಿಯಂದು ಪ್ರಾರಂಭಗೊಂಡ ಈ ಷಷ್ಠಿಪೂರ್ತಿ ಕಾರ್ಯಕ್ರಮವು ಪ್ರಖಂಡ ಸಮ್ಮೇಳನಗಳ ಮೂಲಕ ಸಮಾರೋಪಗೊಳ್ಳಲಿದೆ. ದಕ್ಷಿಣ ಕನ್ನಡ ಜಿಲ್ಲೆಯ 21 ಪ್ರಖಂಡಗಳಲ್ಲಿ ಷಷ್ಠಿಪೂರ್ತಿ ಸಮಾರೋಪದ ಪ್ರಯುಕ್ತ ಬೃಹತ್ ಹಿಂದೂ ಸಮಾವೇಶಗಳು, ಸಮ್ಮೇಳನಗಳು, ಶೋಭಾಯಾತ್ರೆ ಮೆರವಣಿಗೆ ಬೇರೆ ಬೇರೆ ಕ್ರೀಡಾಕೂಟಗಳು, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.ಮಂಗಳೂರು ನಗರದ ನಾಗುರಿ ಪ್ರಖಂಡ, ಬೋಳಾರ ಪ್ರಖಂಡ, ಮಣ್ಣಗುಡ್ಡೆ ಪ್ರಖಂಡ, ಕಾವೂರು ಪ್ರಖಂಡ, ಕೊಡಿಯಾಲಬೈಲ್ ಪ್ರಖಂಡ, ಉಳ್ಳಾಲ ತಾಲೂಕಿನ ಉಳ್ಳಾಲ ನಗರ ಮತ್ತು ಗ್ರಾಮಾಂತರ ಪ್ರಖಂಡ, ಗುರುಪುರ ಪ್ರಖಂಡ, ಮೂಡುಬಿದಿರೆ ಪ್ರಖಂಡ, ಮೂಲ್ಕಿ ಪ್ರಖಂಡ, ಬಂಟ್ವಾಳ, ವಿಟ್ಲ, ಪುತ್ತೂರು ನಗರ ಮತ್ತು ಗ್ರಾಮಾಂತರ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು, ಕಲ್ಲಡ್ಕ, ಕಡಬ, ಸುಳ್ಯ ಪ್ರಖಂಡಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಸಾಧು ಸಂತರು, ವಿವಿಧ ಕ್ಷೇತ್ರದ ಧಾರ್ಮಿಕ ಮುಖಂಡರು, ಜಾತಿ, ಮತ, ಪಂಥಗಳ ಪ್ರಮುಖರು, ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಹಿಂದೂ ಸಮಾಜದ ಬಂಧುಗಳು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಶರಣ್ ಪಂಪ್‌ವೆಲ್ ತಿಳಿಸಿದರು.
ವಿಎಚ್‌ಪಿ ಜಿಲ್ಲಾಧ್ಯಕ್ಷ ಎಚ್.ಕೆ. ಪುರುಷೋತ್ತಮ್, ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷ ಮನೋಹರ್ ಸುವರ್ಣ, ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಇದ್ದರು.----ಕಾರ್ಕಳ ಅತ್ಯಾಚಾರದಲ್ಲಿ ಪ್ರಕರಣದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಶರಣ್‌ಕನ್ನಡಪ್ರಭ ವಾರ್ತೆ ಮಂಗಳೂರುಕಾರ್ಕಳದಲ್ಲಿ ಯುವತಿ ಅತ್ಯಾಚಾರ ಪ್ರಕರಣದಲ್ಲಿ ಪ್ರಥಮ ಆರೋಪಿ ಅಲ್ತಾಫ್‌ಗೆ ಮಾದಕ ವಸ್ತು ಪೂರೈಕೆ ಮಾಡಿದ ಆರೋಪದಲ್ಲಿ ಹಿಂದೂ ಕಾರ್ಯಕರ್ತ ಅಭಯ್ ಬಂಧನದ ಕುರಿತು ಪ್ರತಿಕ್ರಿಯಿಸಿದ ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್, ಸಮಾಜ ವಿರೋಧಿ ಚಟುವಟಿಕೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೃತ್ಯ ಯಾರೇ ಎಸಗಿರಲಿ, ಆತ ಅಭಯ್ ಅಥವಾ ಅಹಮ್ಮದ್ ಆಗಿರಲಿ. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿವಾದಾತ್ಮಕ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಶರಣ್ ಪಂಪ್‌ವೆಲ್, ''''''''ಬಾಂಗ್ಲಾ ದೇಶದಲ್ಲಿ ನಡೆದ ದಂಗೆಯಂತೆಯೇ ಇಲ್ಲೂ ನಡೆಯಲಿದೆ'''''''' ಎಂದು ಐವನ್ ಹೇಳಿಕೆ ನೀಡಿದ್ದಾರೆ. ಆದರೂ ಪೊಲೀಸ್ ಇಲಾಖೆ ಇನ್ನೂ ಕ್ರಮ ಕೈಗೊಂಡಿಲ್ಲ. ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಒಂದು ಕಾನೂನು, ಇತರರಿಗೆ ಇನ್ನೊಂದು ಕಾನೂನು, ಐವನ್ ಡಿಸೋಜ ಅವರಿಗೆ ಮತ್ತೊಂದು ಕಾನೂನು ಇದೆಯಾ? ಪೊಲೀಸ್ ಇಲಾಖೆ ಐವನ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.