ಜಿಲ್ಲಾದ್ಯಂತ ‘ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ’

KannadaprabhaNewsNetwork |  
Published : Feb 05, 2024, 01:53 AM ISTUpdated : Feb 05, 2024, 04:06 PM IST
ಚಿತ್ರ : 4ಎಂಡಿಕೆ2 : ರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ  ಕರಪತ್ರ ಬಿಡುಗಡೆ ಮಾಡಲಾಯಿತು.  | Kannada Prabha

ಸಾರಾಂಶ

ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪ ಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಜಿ. ಧನರಾಜು ಉಪಸ್ಥಿತಿಯಲ್ಲಿ ‘ಸ್ಪರ್ಶ್ ಕುಷ್ಠರೋಗ ಜಾಗೃತಿ ಆಂದೋಲನಾ ಕಾರ್ಯಕ್ರಮ’ ಅನುಷ್ಠಾನದ ಬಗ್ಗೆ ಇತ್ತೀಚೆಗೆ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಭಿತ್ತಿಪತ್ರಗಳು, ಕರಪತ್ರಗಳು ಹಾಗೂ ಬ್ಯಾನರ್ ಬಿಡುಗಡೆಗೊಳಿಸಿದರು. ಕರಪತ್ರ ಬಿಡುಗಡೆ ಮಾಡಿದ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಎಂ.ಕೆ. ಮಾತನಾಡಿ, ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ನಡೆಸಲಾಯಿತು. 

ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯ ಎಂದು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಎನ್.ಆನಂದ್ ಮಾತನಾಡಿ, ಜ.30ರಿಂದ ಫೆ.13ರ ವರೆಗೆ ಜಿಲ್ಲಾದ್ಯಂತ ‘ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ’ ಕಾರ್ಯಕ್ರಮ ನಡೆಯಲಿದೆ. 

ಪ್ರತಿ ಗ್ರಾಮಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಈ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಹಾಗೂ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಕೊಡಗು ಜಿಲ್ಲೆಯಲ್ಲಿ ಒಟ್ಟು 5 ಎಂ.ಬಿ. ಪ್ರಕರಣಗಳಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೆಲ್ಪ್‌ ಕೇರ್‌ ಕಿಟ್ ಹಾಗೂ ಎಂ.ಸಿ.ಆರ್. ಫೂಟ್‌ವೇರ್‌ಗಳನ್ನು ಸಹ ನೀಡಿದ್ದೇವೆ ಎಂದು ಹೇಳಿದರು.

ವ್ಯಾಪಕ ಪ್ರಚಾರ ಕೈಗೊಳ್ಳಲು ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನಿಡಲಾಗುತ್ತದೆ ಎಂದು ತಿಳಿಸಿದರು.

ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಸಭೆಗಳನ್ನು ನಡೆಸಿ ಕುಷ್ಠರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ನಡೆಸಲಾಗುತ್ತಿದೆ. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮಾಧಿಕಾರಿ ಡಾ.ಆನಂದ್ ಹಾಗೂ ಇತರೆ ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.

ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯ ಪಡುವ ಅಗತ್ಯವಿಲ್ಲ, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಶಾಲಾ ಮಕ್ಕಳ ತಪಾಸಣೆ, ಉಪ ಆರೋಗ್ಯ ಕೇಂದ್ರ ಮೂಲಕ ಗ್ರಾಮದಲ್ಲಿ ಜಾಗೃತಿ ಮೂಡಿಸುವುದಲ್ಲದೇ, ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾ ವಿಧಿ ಬೋಧಿಸಲಾಗುವುದು ಎಂದರು.

ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲ, ಮಚ್ಚೆಗಳು, ತ್ವಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆ, ಮಚ್ಚೆಗಳು ಕಂಡುಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕರ ತೆರಳಿ ಪರೀಕ್ಷಿಸಿಕೊಳ್ಳಬೇಕು ಡಾ.ಆನಂದ್ ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ