ಯಾದಗಿರಿ: ಕಾಂಗ್ರೆಸ್ ಪಕ್ಷದ ಯುವ ಘಟಕದ ಜಿಲ್ಲಾ ಕಾರ್ಯಕಾರಣಿ ಸಭೆ ಜು.1 ರಂದು ಮಧ್ಯಾಹ್ನ 1.30ಕ್ಕೆ ಇಲ್ಲಿನ ಹೊಸಳ್ಳಿ ಕ್ರಾಸ್ ಬಳಿ ಇರುವ ಕೆಇಬಿ ಕಲ್ಯಾಣ ಮಂಪಟದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ರಾಜಾ ಕುಮಾರ ನಾಯಕ ಹೇಳಿದ್ದಾರೆ. ಮುಖ್ಯ ಅತಿಥಿಗಳಾಗಿ ಯುವ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್ .ಎಸ್ .ಮಂಜುನಾಥ ಗೌಡ ಅವರು ಆಗಮಿಸಲಿದ್ದಾರೆಂದು ಅವರು ತಿಳಿಸಿದ್ದಾರೆ.