24, 25ರಂದು ಜಿಲ್ಲಾ ಯುವಜನೋತ್ಸವ ಆಯೋಜನೆ

KannadaprabhaNewsNetwork |  
Published : Oct 10, 2025, 01:00 AM IST
ಗಗಗಗ | Kannada Prabha

ಸಾರಾಂಶ

ನಗರದಲ್ಲಿ ಅಕ್ಟೋಬರ್ 24 ಮತ್ತು 25 ರಂದು ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಅವರಿಗೆ ಸೂಚಿಸಿದರು

ಕನ್ನಡಪ್ರಭ ವಾರ್ತೆ ತುಮಕೂರು ನಗರದಲ್ಲಿ ಅಕ್ಟೋಬರ್ 24 ಮತ್ತು 25 ರಂದು ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಅವರಿಗೆ ಸೂಚಿಸಿದರು.ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ಜಿಲ್ಲಾ ಪಂಚಾಯತಿಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಪ್ರತಿಭಾವಂತ ಯುವಕರಿಗೆ ವೇದಿಕೆ ಒದಗಿಸುವ ಉದ್ದೇಶದಿಂದ ಈ ಬಾರಿ ಯುವಜನೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಯೋಜಿಸಲಾಗುವುದು ಎಂದು ಹೇಳಿದರು. ಯುವಜನೋತ್ಸವದಲ್ಲಿ ಜನಪದ ನೃತ್ಯ, ಜನಪದ ಗೀತೆ, ಭಾಷಣ, ಕವಿತೆ ಬರೆಯುವುದು, ಕಥೆ ಬರೆಯುವುದು, ಚಿತ್ರಕಲೆ, ವಿಜ್ಞಾನ ಮಾದರಿ ಸೇರಿದಂತೆ ಒಟ್ಟು 9 ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಪ್ರತಿ ಸ್ಪರ್ಧೆಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ತಿಳಿಸಿದರು.ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಕಲಾವಿದರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರತಿ ತಾಲೂಕಿನ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಭಾಗವಹಿಸುವ ಅವಕಾಶ ನೀಡುವುದರ ಜೊತೆಗೆ 15 ರಿಂದ 29 ವರ್ಷದ ಜಿಲ್ಲೆಯ ಯುವಕ ಹಾಗೂ ಯವತಿಯರಿಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. ಯುವಜನರಲ್ಲಿ ರಾಷ್ಟ್ರ ಪ್ರೇಮ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಮತ್ತು ಒಗ್ಗಟ್ಟಿನ ಮನೋಭಾವವನ್ನು ಬೆಳೆಸಲು ಹಾಗೂ ಪ್ರತಿಭೆ, ಸೃಜನಾತ್ಮಕತೆಯನ್ನು ಪ್ರದರ್ಶಿಸಲು ಈ ಯುವಜನೋತ್ಸವ ಕಾರ್ಯಕ್ರಮವು ಉತ್ತಮ ವೇದಿಕೆಯಾಗಲಿದೆ ಎಂದು ಹೇಳಿದರಲ್ಲದೆ. ಕಳೆದ ವರ್ಷದ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಯುವ ಜನೋತ್ಸವದಲ್ಲಿ ಭಾಗವಹಿಸಿದ್ದ ಜಿಲ್ಲಾ ಕಲಾವಿದರನ್ನು ಸನ್ಮಾನಿಸುವುದರ ಜೊತೆಗೆ, ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದವರಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲು ಸೂಚಿಸಿದರು.ಈ ಬಾರಿ ರಾಜ್ಯ ಮಟ್ಟದ ಯುವಜನೋತ್ಸವ ಯಾದಗಿರಿ ಜಿಲ್ಲೆಯಲ್ಲಿ ನಡೆಯಲಿದ್ದು, ಜಿಲ್ಲೆಯ ಪ್ರತಿಭಾವಂತರನ್ನು ಆಯ್ಕೆ ಮಾಡಿ ರಾಜ್ಯ ಮಟ್ಟಕ್ಕೆ ಕಳುಹಿಸಲು ತೀರ್ಪುಗಾರರನ್ನು ನೇಮಿಸಿ ಯಾವುದೇ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಹೇಳಿದರು. ಸ್ಪರ್ಧೆಗಳಲ್ಲಿ ಭಾಗವಹಿಸುವ ಎಲ್ಲ ಕಲಾವಿದರಿಗೆ ಊಟ ಮತ್ತು ಮೂಲಸೌಕರ್ಯಗಳನ್ನು ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಈಶ್ವರಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಿದ್ದರಾಜು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ